ಕಾಂಗ್ರೆಸ್ ಸರ್ಕಾರವು ಭರವಸೆ ನೀಡಿರುವಂತಹ ಐದು ಯೋಜನೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯು ಒಂದಾಗಿದ್ದು ಈ ಯೋಜನೆಯ ಅಡಿಯಲ್ಲಿ ಪ್ರತಿ ಕುಟುಂಬದ ಮಹಿಳೆಯರಿಗೂ ಕೂಡ ಎರಡು ಸಾವಿರ ರೂಪಾಯಿಯನ್ನು ನೀಡಲಾಗುವುದು ಎಂದು ಆದೇಶವನ್ನು ಹೊರಡಿಸಿದೆ. ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ ನೀಡುವ ಯೋಜನೆ ಇದಾಗಿದೆ. ಗೃಹ ಲಕ್ಷ್ಮಿ ಯೋಜನೆಯ ವಿವರವಾದ ರೂಪರೇಷೆ ಹಾಗೂ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ನೀಡಿದೆ.
ಸರ್ಕಾರದ ಆದೇಶ ದಿನಾಂಕ 12/06/2023 ಎಂದು ಉಲ್ಲೇಖಿಸಲಾಗಿದೆ ಗೃಹ ಲಕ್ಷ್ಮಿ ಯೋಜನೆಯ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿ ನೀಡಲು ಸಂಬಂಧಿಸಿದ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಮಂಜೂರಾತಿ ಪ್ರಾಧಿಕಾರವೆಂದು ಪರಿಗಣಿಸಿ ಆದೇಶ ಹೊರಡಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜೊತೆ ಕೈಜೋಡಿಸಿರುವ ಕಂದಾಯ ಇಲಾಖೆ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಪ್ರಕ್ರಿಯೆಯನ್ನು ಸರಳ ರೀತಿಯಲ್ಲಿ ವಿನೂತನ ಗೊಳಿಸಿದೆ ಈ ಬಗ್ಗೆ ಮಾಹಿತಿ ನೀಡಿರುವಂತಹ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳ ಅರ್ಜಿ ಸಲ್ಲಿಕೆಯನ್ನು ಇನ್ನೂ ಸರಳವಾಗಿಸಲು ಕಂದಾಯ ಇಲಾಖೆ ನೇಮಿಸುವ ಸಿಬ್ಬಂದಿ ಫಲಾನುಭವಿಗಳ ಮನೆ ಬಾಗಿಲಿಗೆ ತರಲಿ ಅರ್ಜಿ ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಆದ್ದರಿಂದ ನಿಮ್ಮ ಮನೆ ಬಾಗಿಲಿಗೆ ಸಿಬ್ಬಂದಿ ಬಂದು ಗೃಹ ಲಕ್ಷ್ಮಿ ಯೋಜನೆಯ ಅರ್ಜಿಯನ್ನು ನಿಮ್ಮಿಂದ ಸ್ವೀಕರಿಸುತ್ತಾರೆ ನೀವು ಯಾವುದೇ ರೀತಿಯಾದಂತಹ ಸೈಬರ್ ಸೆಂಟರ್ ಗ್ರಾಮಗ ಒನ್ ಇತ್ಯಾದಿ ಯಾವುದೇ ಕೇಂದ್ರಗಳಿಗೆ ಹೋಗಿ ಅರ್ಜಿಯನ್ನು ಸಲ್ಲಿಸುವ ತಾಪತ್ರಯ ನಿಮಗೆ ಇರುವುದಿಲ್ಲ ಕಂದಾಯ ಇಲಾಖೆ ನೇಮಿಸಿರುವಂತಹ ಸಿಬ್ಬಂದಿಯು ನಿಮ್ಮ ಮನೆ ಬಾಗಿಲಿಗೆ ಬಂದು ಅರ್ಜಿಯನ್ನು ಪಡೆದು ನಿಮ್ಮ ಖಾತೆಗೆ ಎರಡು ಸಾವಿರ ಹಣ ಪಾವತಿ ಹಾಗುವ ರೀತಿಯಲ್ಲಿ ಮಾಡುತ್ತಾರೆ.
ಸರ್ಕಾರವು ಕೆಲವೊಂದಷ್ಟು ಮಾರ್ಗಸೂಚಿಗಳನ್ನು ರೂಪಿಸಿದ್ದು ಈ ಕೆಳಕಂಡಂತೆ ನೋಡಬಹುದು
* ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಲಾಭವನ್ನು ಪಡೆಯುತ್ತಾರೆ.
* ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರು ಇದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆಯು ಅನ್ವಯಿಸುತ್ತದೆ
* ಫಲಾನುಭವಿಗಳು 2023 ಜೂನ್ 15 ರಿಂದ ಜುಲೈ 15ರವರೆಗೆ ಅರ್ಜಿಯನ್ನು ಸಲ್ಲಿಸಬಹುದು.
* ಜುಲೈ 15 ರ ನಂತರ ಫಲಾನುಭವಿಗಳ ಆಯ್ಕೆಯನ್ನು ಮಾಡಲಾಗುತ್ತದೆ ಹಾಗೆಯೇ ಆಗಸ್ಟ್ 15ರ ನಂತರ ಅವರ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.
* ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವಾಗಲಿ ಅಥವಾ ಭೌತಿಕವಾಗಿ ಆಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.
* ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡುವುದು.
* ತಪ್ಪು ಮಾಹಿತಿಗಳನ್ನು ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಹಾಗೆ ಅಂತಹವರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.
* ಈ ಯೋಜನೆಯ ಲಾಭವನ್ನು ಪಡೆಯಲು ಫಲಾನುಭವಿಯು ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಿರಬೇಕು.
ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಕುಟುಂಬದ ಹಾಗು ಯಜಮಾನಿ ಅಥವಾ ಯಜಮಾನಿಯ ಪತಿ GST ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ ಎಂದು ಸರ್ಕಾರವು ಸ್ಪಷ್ಟವಾಗಿ ವಿವರಣೆ ನೀಡಲಾಗಿದೆ. ಈ ಮಾಹಿತಿ ಇಷ್ಟ ಆದರೆ ತಪ್ಪದೇ ಲೈಕ್ ಮಾಡಿ ಮತ್ತು ಇತರರಿಗೂ ಶೇರ್ ಮಾಡಿ.