Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ನವರಾತ್ರಿಗೂ ಮುನ್ನ ರಾಜ್ಯಕ್ಕೆ ಕತ್ತಲೆ ಭಾಗ್ಯ ಗ್ಯಾರೆಂಟಿ ಸರ್ಕಾರವನ್ನು ಲೇವಡಿ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ.!

Posted on October 12, 2023 By Admin No Comments on ನವರಾತ್ರಿಗೂ ಮುನ್ನ ರಾಜ್ಯಕ್ಕೆ ಕತ್ತಲೆ ಭಾಗ್ಯ ಗ್ಯಾರೆಂಟಿ ಸರ್ಕಾರವನ್ನು ಲೇವಡಿ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ.!

ಮೊದಲಿನಿಂದಲೂ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮತ್ತು ಕಾವೇರಿ ವಿವಾದದಲ್ಲಿ ರಾಜ್ಯ ಸರ್ಕಾರ ತೆಗೆಕೊಂಡ ನಿರ್ಧಾರಗಳ ಬಗ್ಗೆ ಕಿಡಿಕಾರುತ್ತಾ ಬಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮತ್ತೊಮ್ಮೆ ತಮ್ಮ ಎಕ್ಸ್ ಜಾಲತಾಣದಲ್ಲಿ ಸುಧೀರ್ಘವಾದ ಬರಹವನ್ನು ಹಂಚಿಕೊಂಡು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಹಲವು ವಿಷಯಗಳನ್ನು ಪ್ರಸ್ತಾಪಿಸಿರುವ ಇವರು ಈ ವಿಚಾರಗಳಲ್ಲಿ ಸರ್ಕಾರದ ನಡೆದುಕೊಂಡಿರುವ ರೀತಿಯನ್ನು ಖಂಡಿಸಿದ್ದಾರೆ. ಅವರು ಹಂಚಿಕೊಂಡಿರುವ ಟ್ವೀಟ್ ವಿವರ ಹೀಗಿದೆ. ಸರಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ ಕೊಡಲು ಸಿದ್ಧತೆ ನಡೆಸಿದೆ ಅದರ ಹೆಸರು ಕತ್ತಲೆಭಾಗ್ಯ ಎಂದಿದ್ದಾರೆ.

ದೇಶ ಕಾಪಡಲು ಸ್ವಂತ ಮಗನ ಪ್ರಾಣವನ್ನು ಲೆಕ್ಕಿಸದೇ ಯುದ್ಧ ಭೂಮಿಗೆ ಕಳುಹಿಸಿ ಕೊಟ್ಟ ಇಸ್ರೇಲ್ ಪ್ರಧಾನಿ.!

ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ, ಗ್ಯಾರಂಟಿ. ಇದು ಸತ್ಯ ಎಂದು ಕುಹಕವಾಡಿದ್ದಾರೆ. ಕಾವೇರಿ ಬಗ್ಗೆ ಸರಕಾರ ಕಳ್ಳಾಟ ಆಡಿದೆ, ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯದ ವಿರುದ್ಧ ನಿಲುವಳಿ ಸೂಚನೆ ಅಂಗೀಕಾರವಾಗಿದೆ.

ಎಮ್ಮೆ ಚರ್ಮದ ರಾಜ್ಯ ಸರಕಾರಕ್ಕೆ ಕಾವೇರಿ ಒಡಲಾಳದ ಬೇಗುದಿ ಬಗ್ಗೆ ಜಾಣ ಕುರುಡು. ಸರಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಸ್ಥಿತಿ ನಿರ್ಮಾಣ ಮಾಡಿದೆ. ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವವಾಗಿ ಬೆಳೆಗಳು ಒಣಗುತ್ತಿವೆ ನಾಲೆಗಳಲ್ಲೂ ನೀರಿಲ್ಲ, ಬೋರ್ ವೆಲ್ ಗಳಿಂದ ಪಂಪ್ ಮಾಡಲು ವಿದ್ಯುತ್ ಇಲ್ಲ. ಮೊದಲೇ ಕ’ಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತದೆ ಸರಕಾರ.

ಫ್ರೀ ಟಿಕೆಟ್ ಪಡೆದು ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ ಗೀತಾ ಶಿವರಾಜ್ ಕುಮಾರ್.!

ವಿದ್ಯುತ್ ಕ್ಷಾಮಕ್ಕೆ ಮೊದಲೇ ಕರ್ನಾಟಕ ವಿದ್ಯುತ್ ಉತ್ಪಾದನೆಯಲ್ಲಿ ಬಂಜರು ಬಿದ್ದಿದೆ. ಉತ್ಪಾದನೆಗೆ ಅಗತ್ಯವಾದ ಮೂಲಗಳೇ ಕ್ಷಾಮಕ್ಕೆ ತುತ್ತಾಗಿರುವುದರಿಂದ ಪರರಾಜ್ಯಗಳ ಮುಂದೆ ದೈನೇಸಿಯಾಗಿ ನಿಂತು ವಿದ್ಯುತ್ ಸಾಲಕ್ಕೆ ಅರ್ಜಿ ಹಾಕಿಕೊಳ್ಳುತ್ತಿದೆ. ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ.

ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ. ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರಕಾರ ಹೊರಗಿನಿಂದಲೇ ಪಡೆಯುತ್ತಿದೆ.

ಮೂರು ತಿಂಗಳಿಗೆ ಗೃಹಲಕ್ಷ್ಮಿ ಮುಕ್ತಾಯ ಮಾಜಿ CM – ಬಸವರಾಜ ಬೊಮ್ಮಾಯಿ

ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕರುನಾಡನ್ನು ಬರ್ಬಾದ್ ಮಾಡಲಿದೆ ಕಾಂಗ್ರೆಸ್ ಸರಕಾರ. ಆದರೆ, ವಿದ್ಯುತ್ ಸಾಲ ನೀಡುವ ಸ್ಥಿತಿಯಲ್ಲಿ ಇತರೆ ರಾಜ್ಯಗಳೂ ಇಲ್ಲ. ಹಾಗಾದರೆ ಮುಂದೇನು? ಸಂಬಂಧಪಟ್ಟ ಸಚಿವರು ಮೌನವ್ರತ ಮಾಡುತ್ತಿದ್ದಾರೆಯೇ? ಅಡ್ಡದಾರಿಯಲ್ಲಿ ಅಧಿಕಾರ ಪಡೆಯಲು 5 ಗ್ಯಾರಂಟಿ ಕೊಟ್ಟ ಕಾಂಗ್ರೆಸ್, 6ನೇ ಗ್ಯಾರಂಟಿ ಕತ್ತಲೆಭಾಗ್ಯವನ್ನು ನವರಾತ್ರಿಗೆ ಮೊದಲೇ ಖಾತರಿಪಡಿಸಿದೆ.

ಈ ಹೊಸ ಭಾಗ್ಯ ಡಿಸೆಂಬರಿಗೋ, ಜನವರಿಗೋ ಎಂದಷ್ಟೇ ತೀರ್ಮಾನ ಆಗಬೇಕಿದೆ. ನಿರ್ವಹಣೆ, ರಿಪೇರಿ ನೆಪದಲ್ಲಿ ಇಡೀ ದಿನ ವಿದ್ಯುತ್ ಕಡಿತ ಮಾಡುತ್ತಿರುವ ಸರಕಾರದ ಸದಾರಮೆ ಆಟ ಈಗಷ್ಟೇ ಗೊತ್ತಾಗುತ್ತಿದೆ. ಹಿಂದೆ ಬರದಂತಹ ಕ್ಲಿ’ಷ್ಟ ಸ್ಥಿತಿ ಇದ್ದರೂ ವಿದ್ಯುತ್ ಖರೀದಿಗಾದರೂ ಹಣ ಇರುತ್ತಿತ್ತು. ಈಗ ಖಜಾನೆ ಖಾಲಿಯಂತೆ, ಲೋಕಸಭೆ ಚುನಾವಣೆವರೆಗೂ ಜನರನ್ನು ಗ್ಯಾರಂಟಿಗಳ ಅಮಲಿನಲ್ಲಿ ತೇಲಿಸಿ ಆಮೇಲೆ ಕೈ ಎತ್ತಿಬಿಡುವ ದು’ಷ್ಟ ಹುನ್ನಾರ ಸರಕಾರದ್ದು.

ತೆರಿಗೆ ಸಂಗ್ರಹ ಹೆಚ್ಚಿಸಲು ಆಸ್ತಿಗಳ ಮರು ಸಮೀಕ್ಷೆ, ನಾಗರಿಕರ ಅನುಕೂಲಕ್ಕಾಗಿ “ನನ್ನ ಸ್ವತ್ತು ಕಾರ್ಯಕ್ರಮ” ಜಾರಿ – ಡಿ.ಕೆ ಶಿವಕುಮಾರ್

ಆ ಕಾರಣಕ್ಕಾಗಿಯೇ ಸರಕಾರ ಸತ್ಯ ಮರೆಮಾಚಿ ಮೊಸಳೆ ಕಣ್ಣೀರು ಹಾಕುತ್ತಿದೆ. ಆದರೆ, ಕತ್ತಲೆಭಾಗ್ಯ ಕರುಣಿಸುವ ಮುನ್ನ ಜನತೆಗೆ ಸತ್ಯವನ್ನೇ ಹೇಳಲಿ. ಬೇಡ ಎಂದವರು ಯಾರು? ಕೂಡಲೇ ವಿದ್ಯುತ್ ದುಸ್ಥಿತಿಯ ಬಗ್ಗೆ ಸರಕಾರ ಶ್ವೇತಪತ್ರ ಹೊರಡಿಸಬೇಕು. ಇದು ನನ್ನ ಆಗ್ರಹ. ವಿದ್ಯುತ್ ಸಾಲಕ್ಕೂ ದಿಕ್ಕಿಲ್ಲದ ಸರಕಾರವು, ಖಾಸಗಿ ವಿದ್ಯುತ್ ಪೂರೈಕೆದಾರರಿಗೆ ಕಳೆದ ಆರೇಳು ತಿಂಗಳಿಂದ ಬಾಕಿ ಹಣ ನೀಡಿಲ್ಲ ಎನ್ನುವ ಮಾಹಿತಿ ಇದೆ.

ಕೆಲ ಕಂಪನಿಗಳಿಗೆ 11 ತಿಂಗಳಿಂದ ಬಿಡಿಗಾಸು ಕೊಟ್ಟಿಲ್ಲವಂತೆ. ಇದು ಹೌದಾ? ಹೌದು ಎಂದಾದರೆ, ರಾಜ್ಯದ ಭವಿಷ್ಯದ ಗತಿ ಏನು? ಕೃಷಿ, ಕೈಗಾರಿಕೆಗಳ ಪಾಡೇನು? ಬೇಕಾಬಿಟ್ಟಿ ಬೆಲೆ ಏರಿಕೆ ಬರೆ ಏರಿಸಿಕೊಂಡು ಏದುಸಿರು ಬಿಡುತ್ತಿರುವ ಜನರಿಗೆ ಸರಕಾರದ ಉತ್ತರವೇನು? ಕೃತಕ ಕತ್ತಲು ಸೃಷ್ಟಿಸಿ ಕಳ್ಳ ಬೆಕ್ಕಿನಂತೆ ಕದ್ದು ಹಾಲು ಕುಡಿಯುತ್ತೇವೆ ಎಂದರೆ ಆಗುವುದಿಲ್ಲ. ಜನರಿಗೂ ಕಳ್ಳಬೆಕ್ಕಿನ ಕಣ್ಣಾಮುಚ್ಚಾಲೆ ಈಗೀಗ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಸುಧೀರ್ಘವಾದ ಬರಹ ಬರೆದಿದ್ದಾರೆ.

Viral News

Post navigation

Previous Post: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ತುಟ್ಟಿಭತ್ಯೆ ಶೇ.4% ಹೆಚ್ಚಳ.!
Next Post: BJP ಯಲ್ಲಿ ಆದ ನೋವು, ಅಪಮಾನ ಸಹಿಸಲಾರದೇ ಕಾಂಗ್ರೆಸ್ ಸೇರಿದೆ ಎಂದ ಮಾಜಿ ಶಾಸಕ ರಾಮಪ್ಪ ಲಮಾಣಿ.!

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme