ವರಮಹಾಲಕ್ಷ್ಮಿ ದಿನ ಪೂಜೆ ಹೆಸರೇ ಸೂಚಿಸಿದಂತೆ ಇದು ಲಕ್ಷ್ಮಿ ದೇವಿಯನ್ನು ಪೂಜಿಸುವ ದಿನ ಶ್ರಾವಣ ಮಾಸದ ಶುಕ್ಲ ಪಕ್ಷದ ಶುಕ್ರವಾರ ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು ವರಮಹಾಲಕ್ಷ್ಮಿ ದಿನ ಆಚರಣೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಶ್ರೇಷ್ಠತೆ ಪಡೆದುಕೊಳ್ಳುತ್ತಿದೆ. ಪ್ರತಿಯೊಬ್ಬ ಗೃಹಣಿಯರ ಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲು ಮುಂದಾಗುತ್ತಿದ್ದಾರೆ
ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾಗಿ ಲಕ್ಷ್ಮಿದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ. ಲಕ್ಷ್ಮಿ ಕೂರುಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ ರೀತಿ ನೀತಿ ನಿಯಮಗಳ ಮೂಲಕ ಲಕ್ಷ್ಮಿ ಪೂಜೆಯನ್ನು ಮಾಡಬೇಕು. ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ ಹಾಗೆ ಲಕ್ಷ್ಮಿ ಪೂಜೆಗೆ ನಿಯಮಗಳಿದ್ದು ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.
ಲಕ್ಷ್ಮಿ ಪೂಜೆ ಹೇಗೆ ಮಾಡಬೇಕು ಅವುಗಳ ರೀತಿ ನೀತಿ ನಿಯಮಗಳೇನು ಎಂದು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ.
ಲಕ್ಷ್ಮಿ ಪೂಜೆ ಮಾಡುವ ಹಿಂದಿನ ದಿನವೇ ಶುಭ್ರವಾಗಿ ಪೂಜೆಗೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ತಯಾರು ಮಾಡಿಕೊಳ್ಳಬೇಕು. ಉದಾಹರಣೆಗೆ ಸೀರೆ, ಹಣ್ಣು, ಅಲಂಕಾರ ವಸ್ತು, ಶುದ್ದ, ನೀರು ಇತ್ಯಾದಿ.
ಲಕ್ಷ್ಮಿಯನ್ನು ಉತ್ತರಭಿಮುಖವಾಗಿ ಪ್ರತಿಷ್ಠಾಪಿಸುವುದಾದರೆ ಹಸಿರು ಬಣ್ಣದ ಸೀರೆಯನ್ನು ತೊಡಿಸಬೇಕು ಕೆಂಪು ಮತ್ತು ಹಳದಿ ಹೂವುಗಳನ್ನು ಬಳಸಬೇಕು ದೀಪವನ್ನು ತುಪ್ಪದಿಂದ ಹಚ್ಚಬೇಕು.
ಪೂಜೆಯ ದಿನದಂದು ಮಹಿಳೆಯರು ಸೂರ್ಯ ಹುಟ್ಟುವುದಕ್ಕೆ ಮುಂಚೆಯೇ ಎದ್ದು ಶುದ್ಧ ನೀರಿನಿಂದ ಸ್ನಾನ ಮಾಡಬೇಕು ಲಕ್ಷ್ಮಿ ವ್ರತ ಮಾಡುವವರೇ ಕಲಶ ಸ್ಥಾಪನೆ ಮಾಡಬೇಕು.
ಪೂಜಾ ಸ್ಥಳವನ್ನು ತುಂಬಿದ ಕೊಡದ ನೀರಿನಿಂದ ಶುದ್ಧ ಮಾಡಿ ಸ್ಥಳದಲ್ಲಿ ಅಷ್ಟದಳ ರಂಗೋಲಿ ಹಾಕಿ ಬಾಳೆ ಕಂಬ ಮಾವಿನ ಎಲೆಗಳಿಂದ ಸಿಂಗರಿಸಬೇಕು.
ಕಳಶಕ್ಕೆ ತುಂಬಿದ ಕೊಡದ ಶುದ್ಧ ನೀರು ಹಾಕಿ ಶುದ್ಧ ಅಕ್ಕಿ ಹಾಕಬೇಕು ಇದರ ಜೊತೆಗೆ ಅರಿಶಿಣದ ಕೊಂಬು, ಅಡಿಕೆ, ಬೆಳ್ಳಿ ಅಥವಾ ಯಾವುದೇ ನಾಣ್ಯ, ದ್ರಾಕ್ಷಿ, ಗೋಡಂಬಿ, ಕರ್ಜೂರ, ಬಾದಾಮಿ, ಕಲ್ಲು ಸಕ್ಕರೆ ಹಾಕಬೇಕು.
ನಂತರ 9 ಎಳೆಯ ದಾರ ತೆಗೆದುಕೊಂಡು ಇದಕ್ಕೆ ಅರಿಶಿನ ಹಚ್ಚಿ ಅರಿಶಿನದ ಕೊಂಬನ್ನು ಕಟ್ಟಿ ತಾಳಿ ಮಾಡಬೇಕು ಇದನ್ನು ಕಳಶದ ಚೊಂಬಿಗೆ ಕಟ್ಟಿದರೆ ಕಳಶ ತಯಾರಾಗುತ್ತದೆ.
ನಂತರ ಶುಭ್ರವಾಗಿ ತೊಳೆದ ತೆಂಗಿನಕಾಯಿಗೆ ಅರಿಶಿಣ ಹಚ್ಚಬೇಕು ಅರಿಶಿನ ಹಚ್ಚಿದ ತೆಂಗಿನಕಾಯಿಗೆ ಕುಂಕುಮ ಬೊಟ್ಟು ಇಡಬೇಕು, ಕಳಸದ ಬಾಯಿಗೆ ವೀಳ್ಯದೆಲೆ ಅಥವಾ ಮಾವಿನ ಎಲೆ ಇಡಬೇಕು ನಂತರ ತಟ್ಟೆಯೊಂದಕ್ಕೆ ಅಕ್ಕಿ ಹಾಕಿ ಇದರ ಮೇಲೆ ಕಳಶವನ್ನು ಇಡಬೇಕು.
ದೇವರ ಬಳಿ ಇಚ್ಛೆಯನ್ನು ಹೇಳಿಕೊಂಡು ದೇವಿಯನ್ನು ಬೇಡಿ ಸಂಕಲ್ಪ ಮಾಡಿಕೊಳ್ಳ.ಬೇಕು ನಂತರ ದೇವಿಯನ್ನು ಪ್ರಾಣ ಪ್ರತಿಷ್ಠಾಪನೆ ಮಾಡಬೇಕು.
ಪ್ರಾಣ ಪ್ರತಿಷ್ಠಾಪನೆ ವಿಧಾನ
ಇಷ್ಟು ಆದ ನಂತರ ಲಕ್ಷ್ಮಿ ದೇವಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಬೇಕು ಇದಕ್ಕೆ ಷೋಡಶೋಪಚಾರ ಪೂಜೆಯೆಂದು ಕರೆಯಲಾಗುತ್ತದೆ ದೇವಿಯು ತನ್ನ ಎಲ್ಲಾ ಅಂಗಾಂಗ ಪರಿವಾರ ಆಯುಧ ಮತ್ತು ಶಕ್ತಿ ಸಹಿತವಾಗಿ ಬಂದು ಮೂರ್ತಿಯಲ್ಲಿ ಪ್ರತಿಷ್ಠಾಪಿತಳಾಗಬೇಕು ಮತ್ತು ನಮ್ಮ ಪೂಜೆಯನ್ನು ಸ್ವೀಕರಿಸಬೇಕು ಎಂದು ದೇವಿಯಲ್ಲಿ ಸಂಪೂರ್ಣ ಶರಣಾಗತ ಭಾವದಿಂದ ಮಾಡುವ ಪ್ರಾರ್ಥನೆಗೆ ಪ್ರಾಣ ಪ್ರತಿಷ್ಠಾಪನೆ ಎಂದು ಕರೆಯಲಾಗುತ್ತದೆ.