ನಮಸ್ಕಾರ ಸ್ನೇಹಿತರೆ, ಇಂದಿನ ವಿಶೇಷ ಲೇಖನಕ್ಕೆ ತಮಗೆಲ್ಲರಿಗೂ ಸ್ವಾಗತ ಜಿಲ್ಲಾ ನ್ಯಾಯಾಲಯದಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ ದ್ವಿತೀಯ ಪಿಯುಸಿ ಪಾಸ್ ಆಗಿರುವ ಅಭ್ಯರ್ಥಿಗಳಿಂದ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗಳು ಖಾಲಿ ಇದೆ.
ಜಿಲ್ಲಾ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸಲು ವಯೋಮಿತಿ ನೋಡುವುದಾದರೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯೋಮಿತಿ ಆಗಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, 2ಎ, 2ಬಿ, 3ಎ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುವಂತಹ ಅಭ್ಯರ್ಥಿಗಳಿಗೆ ವೇತನವನ್ನು ನಿಗದಿಪಡಿಸಲಾಗಿದೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 27,650 ರಿಂದ 52,650 ವರೆಗೆ ವೇತನ ನೀಡಲಾಗುತ್ತದೆ. ಇದು ಅಭ್ಯರ್ಥಿಯ ಮಾಸಿಕ ವೇತನ ಅಂದರೆ ಒಂದು ತಿಂಗಳಿಗೆ ಪಡೆದುಕೊಳ್ಳುವಂತಹ ವೇತನವಾಗಿದೆ.
ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುವಂತಹ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳುತ್ತಾರೆ ಎಂದರೆ ಶೀಘ್ರ ಲಿಪಿಕಾರದ ಹುದ್ದೆಗೆ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳ ಹಾಗೂ ಅವರ ನಿಗದಿಪಡಿಸಿದ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟು ಸರಾಸರಿ ಆಧಾರದ ಮೇಲೆ ಮೆರಿಟ್ ವೈಸ್ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುತ್ತದೆ.
ಅರ್ಜಿ ಶುಲ್ಕ ನೋಡುವುದಾದರೆ ಸಾಮಾನ್ಯ ಪ್ರವರ್ಗ 2ಎ, 2ಬಿ, 3ಎ ಅಭ್ಯರ್ಥಿಗಳಿಗೆ ತಲಾ 300 ರೂಪಾಯಿ ಅರ್ಜಿ ಶುಲ್ಕ ಇರುತ್ತದೆ. ಎಸ್ಸಿ ಎಸ್ಟಿ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿ ಮಾಡಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿ ಮಾಡಬಹುದು.
ಜಿಲ್ಲಾ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಹುದ್ದೆಗಳ ಹೆಸರು:- ಶೀಘ್ರ ಲಿಪಿ ಗಾರರು,
ಹುದ್ದೆಗಳ ಸಂಖ್ಯೆ:- 13 ಹುದ್ದೆಗಳು
ಉದ್ಯೋಗ ಸ್ಥಳ:- ಬೆಳಗಾವಿ ಜಿಲ್ಲೆ
ವಿದ್ಯಾರ್ಹತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೂರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮೋ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅಥವಾ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರ ಲಿಪಿಯಲ್ಲಿ ಹಿರಿಯ ದರ್ಜೆ ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮೋ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರ ಲಿಪಿ ಹಾಗು ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಾಸ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಥಿ ಹೊಂದಿರಬೇಕು.
ಅರ್ಜಿ ಸಲ್ಲಿಸುವ ದಿನಾಂಕ 21.07.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21.08.2023
ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ 24.08.2023