Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ಇನ್ನು ಮುಂದೆ ಜನನ ಮತ್ತು ಮರಣ ಪ್ರಮಾಣ ಪತ್ರಗಳು ನಿಮ್ಮ ಮನೆ ಬಾಗಿಲಿಗೆ ಬಂದು ಬೀಳುತ್ತದೆ. ಗುಡ್ ನ್ಯೂಸ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್.

Posted on July 12, 2023 By Admin No Comments on ಇನ್ನು ಮುಂದೆ ಜನನ ಮತ್ತು ಮರಣ ಪ್ರಮಾಣ ಪತ್ರಗಳು ನಿಮ್ಮ ಮನೆ ಬಾಗಿಲಿಗೆ ಬಂದು ಬೀಳುತ್ತದೆ. ಗುಡ್ ನ್ಯೂಸ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್.

ನಮಸ್ಕಾರ ಸ್ನೇಹಿತರೆ ಇಂದಿನ ವಿಶೇಷ ಲೇಖನಕ್ಕೆ ತಮಗೆಲ್ಲರಿಗೂ ಸ್ವಾಗತ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ನಾವು ಯಾವುದೇ ಕಚೇರಿಗಳಿಗೆ ಹೋಗದೆ ನಮ್ಮ ಮನೆಯ ಹತ್ತಿರವೇ ಪಡೆದುಕೊಳ್ಳಬಹುದು ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸಲು ಹೊರಟಿದ್ದೇವೆ ಜನನ ಪ್ರಮಾಣ ಪತ್ರಗಳು ಇಂದಿನ ದಿನಗಳಲ್ಲಿ ಮುಖ್ಯವಾದ ದಾಖಲೆಗಳಾಗಿವೆ. ಸರಕಾರದ ಕಚೇರಿಗಳಲ್ಲಿ ಜನನ, ಮರಣದ ಕುರಿತಾದ ಸಮಗ್ರ ದಾಖಲೆ ದೊರೆಯದ ಕಾರಣ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತಿತ್ತು. ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಜನನ ಪ್ರಮಾಣ ಪತ್ರ ಮುಖ್ಯವಾಗಿದೆ.

ಅಲ್ಲದೇ ಒಂದು ವರ್ಷ ಮೇಲ್ಪಟ್ಟಾದರೆ ನ್ಯಾಯಾಲಯದ ಮೂಲಕ ಸಾಕ್ಷಿ, ದಾಖಲೆ ಕಲೆ ಹಾಕಬೇಕಿತ್ತು. ಇದರಿಂದ ಕೆಲಸದ ಭಾರ ಹೆಚ್ಚಾಗುತ್ತಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜನನ ಮರಣ ಪ್ರಮಾಣ ಪತ್ರಗಳನ್ನು ಅರ್ಜಿದಾರರ ಮನೆ ಬಾಗಿಲಿಗೆ ತಲುಪಿಸುವಂತಹ ವಿಶಿಷ್ಟ ಯೋಜನೆ ಯನ್ನು ಕೈಗೊಂಡಿದ್ದಾರೆ ಇದರ ಅಡಿಯಲ್ಲಿ ಯಾರೆಲ್ಲಾ ಅರ್ಜಿ ಸಲ್ಲಿಸುತ್ತಾರೋ ಅಂತಹ ಅವರ ಮನೆಗೆ ಜನನ ಮತ್ತು ಮರಣ ಪ್ರಮಾಣಗಳನ್ನು ತಲುಪಿಸಲಾಗುತ್ತದೆ.

ಜನನ ಪ್ರಮಾಣ ಪತ್ರ ಮತ್ತು ಮರಣ ಪ್ರಮಾಣ ಪತ್ರ ಒಂದು ಮುಖ್ಯವಾದಂತಹ ದಾಖಲಾತಿಗಳು ಆಗಿವೆ. ನಮ್ಮ ದಿನನಿತ್ಯದ ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಈ ದಾಖಲೆ ಅತ್ಯಂತ ಅಗತ್ಯವಾಗಿದ್ದು ವ್ಯಕ್ತಿಯು ತನ್ನ ವಿದ್ಯಾಭ್ಯಾಸ ಉದ್ಯೋಗ ಹಾಗೆ ಇನ್ನಿತರ ಸರ್ಕಾರಿ ಮತ್ತು ಖಾಸಗಿ ವಲಯ ಹಾಗೆಯೇ ಶಿಕ್ಷೈಕ್ಷಣಿಕ ಸಾಮಾಜಿಕ ಮತ್ತು ಆರ್ಥಿಕ ವಹಿವಾಟಿಗಳನ್ನು ನಡೆಸಲು ಜೀವಂತ ವಿರುವಾಗಲು ಮತ್ತು ಮರಣದ ನಂತರ ಆತನ ಕುಟುಂಬಕ್ಕೆ ಇದು ತುಂಬಾ ಅವಶ್ಯಕವಾಗಿರುತ್ತದೆ.

ಅದರಲ್ಲಿಯೂ ನಮ್ಮ ಕರ್ನಾಟಕದ ಉಡುಪಿ ಜಿಲ್ಲೆಯು ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದೆ ಇಲ್ಲಿನ ಮಣಿಪಾಲ ಆಸ್ಪತ್ರೆಗೆ ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯದ ರೋಗಿಗಳು ಸಹ ಬಂದು ಚಿಕಿತ್ಸೆಯನ್ನು ಪಡೆಯುತ್ತಾರೆ ಈ ಆಸ್ಪತ್ರೆಯಲ್ಲಿ ನೂರಾರು ಮಕ್ಕಳ ಜನನ ಮತ್ತು ರೋಗ ಉಲ್ಬಣಗೊಂಡು ಅಂತಿಮ ಹಂತದಲ್ಲಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳು ವೈದ್ಯರ ಸತತ ಶ್ರಮದ ಪ್ರಯತ್ನದ ನಂತರವೂ ಚಿಕಿತ್ಸೆ ಫಲಕಾರಿಯಾಗದೆ ಮರಣಗಳು ಸಂಭವಿಸುತ್ತದೆ.

ಹೊರ ಜಿಲ್ಲೆಯಿಂದ ಅಥವಾ ಹೊರ ರಾಜ್ಯದಿಂದ ಬಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ ನಂತರ ಆ ವ್ಯಕ್ತಿಯ ಕುಟುಂಬಕ್ಕೆ ಮುಂದಿನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಮರಣ ಪ್ರಮಾಣ ಪತ್ರವು ಅತ್ಯಂತ ಅಗತ್ಯವಾಗಿ ಇರುತ್ತದೆ ಹಲವು ಸಂದರ್ಭಗಳಲ್ಲಿ ಸಂಬಂಧಿಸಿದ ಸ್ಥಳೀಯ ಜನನ ಪ್ರಮಾಣ ನೊಂದಣಿ ಪ್ರಾಧಿಕಾರಕ್ಕೆ ಪ್ರಮಾಣ ಪತ್ರ ಕೋರಿ ಅರ್ಜಿ ಸಲ್ಲಿಸಿದರು ಸಹ ತಾಂತ್ರಿಕ ಕಾರಣಗಳಿಂದ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗುವುದಿಲ್ಲ ಮತ್ತು ಇದೇ ಉದ್ದೇಶಕ್ಕೆ ವ್ಯಕ್ತಿಯ ಮರಣದ ದುಃಖದ ನಡುವೆ ಉಡುಪಿ ಜಿಲ್ಲೆಗೆ ಪುನಃ ಸಾವಿರಾರು ಖರ್ಚು ಮಾಡಿಕೊಂಡು ಬರಬೇಕಾಗುತ್ತದೆ.

ಈ ರೀತಿಯಾದಂತಹ ಸಮಸ್ಯೆಗಳನ್ನು ತಡೆಗಟ್ಟುವ ಸಲುವಾಗಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಅವರು ವಿಶೇಷ ಮುತುವರ್ಜಿಯನ್ನು ವಹಿಸಿ ಉಡುಪಿ ನಗರಸಭೆ ಮತ್ತು ಅಂಚೆ ಇಲಾಖೆಯ ಮೂಲಕ ಉಡುಪಿ ಜಿಲ್ಲೆಯ ಮಣಿಪಾಲ ಸೇರಿದಂತೆ ಯಾವುದೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ ಹಾಗೆ ಜಿಲ್ಲೆಯಲ್ಲಿ ಇತರೆ ಕಾರಣಗಳಿಂದ ಮರಣ ಹೊಂದಿದ ಹೊರ ಜಿಲ್ಲೆ ಮತ್ತು ಹೊರ ರಾಜ್ಯದ ವ್ಯಕ್ತಿಗಳ ಕುಟುಂಬದ ಮನೆ ಬಾಗಿಲಿಗೆ ಮರಣ ಪ್ರಮಾಣ ಪತ್ರವನ್ನು ಅಂಚೆ ಮೂಲಕ ತಲುಪಿಸುವಂತಹ ನಾಗರಿಕವಿಶಿಷ್ಟ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಮರಣ ಹೊಂದಿದಂತಹ ವ್ಯಕ್ತಿಯ ಕುಟುಂಬದವರು ಪ್ರಮಾಣಪತ್ರವನ್ನು ಕೇಳಿ ಸಂಬಂಧಿಸಿದ ದಾಖಲೆಗಳೊಂದಿಗೆ ಅರ್ಜಿ ನಮೂನೆಯಲ್ಲಿ ಅಂಚೆ ಮೂಲಕ ಕಳುಹಿಸುವ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಂಡಲ್ಲಿ ಇದಕ್ಕಾಗಿ ನೀವು ನಿಗದಿಪಡಿಸಿರುವಂತಹ 80 ರೂಪಾಯಿಯನ್ನು ಪಾವತಿ ಮಾಡಿದರೆ ಸಾಕು ಕರ್ನಾಟಕ ರಾಜ್ಯ ಸೇರಿದಂತೆ ದೇಶದ ಯಾವುದೇ ಮೂಲೆಯಲ್ಲಿರುವ ಮೃ’ ತ ಕುಟುಂಬಕ್ಕೆ ಸ್ಪೀಡ್ ಪೋಸ್ಟ್ ಮೂಲಕ ಪ್ರಮಾಣ ಪತ್ರವನ್ನು ತಲುಪಿಸಿಕೊಡಲಾಗುತ್ತದೆ. ಈ ಒಂದು ಯೋಜನೆ ಉಡುಪಿಯಲ್ಲಿ ಪ್ರಾರಂಭವಾಗಿದ್ದು ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಉಡುಪಿ ನಗರದ ಸ್ಥಳೀಯ ಜನನ ಮರಣ ನೊಂದಣಿ ಪ್ರಾಧಿಕಾರವಾದ ಉಡುಪಿ ನಗರಸಭೆ ಮತ್ತು ಅಂಚೆ ಇಲಾಖೆಗಳು ಈ ಸೇವೆ ಒದಗಿಸಲು ಪರಸ್ಪರ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ.

ಜಿಲ್ಲೆಗೆ ವೈದ್ಯಕೀಯ ಚಿಕಿತ್ಸೆ ಉದ್ಯೋಗ ಸೇರಿದಂತೆ ಹಲವು ಕಾರಣಗಳಿಗೆ ಸಾವಿರಾರು ಮಂದಿ ವಲಸೆ ಆಗಮಿಸುತ್ತಿದ್ದು ವಿವಿಧ ಕಾರಣಗಳಿಂದ ಮೃ’ ತಪಟ್ಟ ವ್ಯಕ್ತಿಗಳ ಮರಣ ಪ್ರಮಾಣ ಪತ್ರವನ್ನು ಸಕಾಲದಲ್ಲಿ ಪಡೆಯಲು ತೊಂದರೆಯಾಗುತ್ತಿದ್ದ ಕಾರಣ ನಗರ ಸಭೆ ಮತ್ತು ಅಂಚೆ ಇಲಾಖೆ ಮೂಲಕ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಕಳೆದ ಹತ್ತು ದಿನಗಳಲ್ಲಿ ನೂರಕ್ಕೂ ಅಧಿಕ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸಂಬಂಧಿಸಿದವರಿಗೆ ಯಶಸ್ವಿಯಾಗಿ ಅವರ ಮನೆ ಬಾಗಿಲಿಗೆ ತಲುಪಿಸಲಾಗಿದೆ. ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ಸ್ ಮೂಲಕ ತಿಳಿಸಿ.

News Tags:Birth certificate, Death certificate

Post navigation

Previous Post: ಈ 5 ತಪ್ಪುಗಳನ್ನು ಮಾಡಿದರೆ ಕಲಿಯುಗ ಅಂತ್ಯಗೊಳ್ಳುವುದು ಖಂಡಿತ. ಆ ಐದು ತಪ್ಪುಗಳು ಇದೇ ನೋಡಿ.
Next Post: ಅತಿ ಸುಲಭವಾಗಿ ಈ ಯಂತ್ರದ ಮೂಲಕ ನೀವು ಹೂವು ಕಟ್ಟಬಹುದು. ಯಾಂತ್ರಿಕ ಯುಗ.

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme