ಸೆಪ್ಟೆಂಬರ್ 20 ರಂದು ಗಡಿ ಜಿಲ್ಲೆ ಚಾಮರಾಜನಗರದಲ್ಲಿರುವ ಪ್ರಸಿದ್ಧ ಪುಣ್ಯಕ್ಷೇತ್ರವಾದ ಹನೂರು ತಾಲೂಕಿನ ಶ್ರೀ ಮಲೈ ಮಹದೇಶ್ವರ ಪುಣ್ಯಕ್ಷೇತ್ರದಲ್ಲಿ ಈ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರ ಆವರಣದಲ್ಲಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ ಆಯೋಜಿಸಿದ್ದರು. ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದ್ದು, ಅಂದು 37 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
39 ಮಂದಿ ನವ ಜೋಡಿಗಳು ಸಾಮೂಹಿಕ ವಿವಾಹಕ್ಕೆ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ, 37 ಮಂದಿಗೆ ಮಾತ್ರ ಅವಕಾಶ ಸಿಕ್ಕಿದೆ. ಪಟ್ಟದ ಗುರುಸ್ವಾಮಿಗಳು, ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ಸಮ್ಮುಖದಲ್ಲಿ ವಿವಾಹ ಕಾರ್ಯಕ್ರಮ ನೆರವೇರಿತು. ಮಾನ್ಯ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಆಗಮಿಸಿ, ಮಂಗಳಸೂತ್ರವನ್ನು ವರರಿಗೆ ಹಸ್ತಾಂತರಿಸಿ, ಆಶೀರ್ವದಿಸುವ ಮೂಲಕ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದರು.
ಜೆಡಿಎಸ್ & ಮುಸ್ಲಿಂ ನಾಯಕರ ಸಭೆ ಅಂತ್ಯ, ಸಾಮೂಹಿಕ ರಾಜೀನಾಮೆಗೆ ನಿರ್ಧಾರ.!
ಈ ಸಮಯದಲ್ಲಿ ರೈತರು ಕೃಷಿ ಸಾಲ ಮಾಡಿ ಮಕ್ಕಳಿಗೆ ಅದ್ದೂರಿಯಾಗಿ ಮದುವೆ ಮಾಡುವುದನ್ನು ನಿಲ್ಲಿಸಬೇಕು ಎನ್ನುವ ಕುರಿತು ರೈತ ಬಾಂಧವರಿಗೆ ಮುಖ್ಯಮಂತ್ರಿಗಳು ಬುದ್ಧಿ ಮಾತು ಹೇಳಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯರವರು ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ, ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಕರೆ ನೀಡಿದರು.
ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತಿವೆ. ಜೀವನ ಪರ್ಯಂತ ಆ ಸಾಲ ತೀರಿಸಲು ಎಣಗಾಡಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು, ಈ ಕಾರ್ಯಕ್ರಮ ಅದಕ್ಕೆ ಸ್ಪೂರ್ತಿಯಾಗಲಿ ಎಂದರು. ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕವಾಗಿ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ.
ಒಂದೇ ದಿನಕ್ಕೆ 24,000 ರೂಪಾಯಿ ಮೌಲ್ಯದ ಆಸ್ತಿ ನೋಂದಣಿ, ಸರ್ಕಾರಕ್ಕೆ ಬರೋಬ್ಬರಿ 244 ಕೋಟಿ ಆದಾಯ.!
ಆದ್ದರಿಂದ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೈ ಮಹದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದರು.
ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸುತ್ತೇವೆ ಎಂದು ಮಹತ್ವದ ಘೋಷಣೆ ಮಾಡಿದರು. ಹಾಗೆಯೇ ಇದೇ ವೇಳೆ ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂದುವರೆದು ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ ಇನ್ನು ಮುಂದೆ ಇದು ತಪೋಭವನ ಎಂದು ಕರೆಸಿಕೊಳ್ಳಲಿದೆ ಎಂದರು.
ಮಹದೇಶ್ವರ ತಪಸ್ಸು ಮಾಡಿದಂತಹ ಶಕ್ತಿ ಕೇಂದ್ರ ಇದು ಹಾಗಾಗಿ ಇದನ್ನು ನಾವು ತಪೋಭವನ ಎಂದು ಕರೆಯಬೇಕು ಎಂದರು. ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯವರ ಸಲಹೆ ಪಡೆದೇ ತಪೋಭವನ ಎಂದು ಹೆಸರು ಬದಲಾಯಿಸಿದ್ದೇವೆ ಎಂದರು. ಹನೂರು ಶಾಸಕ M.R ಮಂಜುನಾಥ್ ಈ ಸರಳ ವಿವಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಶು ಸಂಗೋಪನ ಸಚಿವ K.ವೆಂಕಟೇಶ್ ಸಮಾಜ ಕಲ್ಯಾಣ ಸಚಿವ H.C ಮಹದೇವಪ್ಪ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೇರಿ ಜಿಲ್ಲೆಯ ಶಾಸಕರು ಮತ್ತು ನಾಯಕರು ಉಪಸ್ಥಿತರಿದ್ದರು.