Tuesday, October 3, 2023
Home News ನಿಮ್ಮ ಬಳಿ ಕಾರು ಇದ್ದರೆ ಸದ್ಯದಲ್ಲಿಯೇ BPL ಕಾರ್ಡ್ ರದ್ದಾಗಲಿದೆ, ಕೇಂದ್ರ ಸರ್ಕಾರದ ಮಹತ್ವದ ಘೋಷಣೆ.

ನಿಮ್ಮ ಬಳಿ ಕಾರು ಇದ್ದರೆ ಸದ್ಯದಲ್ಲಿಯೇ BPL ಕಾರ್ಡ್ ರದ್ದಾಗಲಿದೆ, ಕೇಂದ್ರ ಸರ್ಕಾರದ ಮಹತ್ವದ ಘೋಷಣೆ.

ಸರ್ಕಾರವು ಆಗಾಗ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತದೆ ಈ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬರೂ ಸಹ ಬದ್ಧರಾಗಿರಬೇಕು ಇದೀಗ BPL ಕಾರ್ಡ್ ಗೆ ಸಂಬಂಧಪಟ್ಟ ಹಾಗೆ ಹೊಸ ನಿಯಮವನ್ನು ಜಾರಿಗೆ ತಂದಿದ್ದು ಈ ನಿಯಮದ ಅಡಿಯಲ್ಲಿ ಕಾರು ಹೊಂದಿರುವಂತಹ ಜನರಿಗೆ ಬಿಪಿಎಲ್ ಕಾರ್ಡ್ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರ ತಿಳಿಸಲಾಗಿದೆ

ಈ ಕುರಿತದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲೇ ತಿಳಿಸುತ್ತಿದ್ದೇವೆ. ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಸರ್ಕಾರವು 5 ಕೆಜಿ ಅಕ್ಕಿ ಹಾಗೂ ಹಣವನ್ನು ನೀಡುತ್ತಿರುವ ಸಲುವಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರ ಚಂದಾದಾರರ ಸಂಖ್ಯೆ ಜಾಸ್ತಿಯಾಗಿದೆ.

ಸರ್ಕಾರವು ಪಡಿತರ ಕಾರ್ಡ್ ವಿತರಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು ಆದರೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು ನೀತಿ ಸಂಹಿತೆಯ ಜಾರಿಯಲ್ಲಿದ್ದ ಕಾರಣಕ್ಕೆ ರೇಷನ್ ಕಾರ್ಡ್ ವಿತರಣೆಗೆ ಕೆಲ ದಿನಗಳ ಕಾಲ ಸ್ಥಗಿತಗೊಳಿಸಲಾಗಿತ್ತು ಈಗ ಹೊಸ ಪಡಿತರ ಚೀಟಿ ವಿತರಣೆಗೆ ಅಧಿಕಾರಿಗಳು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹಸಿದವರಿಗೆ ಅನ್ನ ಕೊಡಬೇಕು ಎಂಬ ಉದ್ದೇಶದಿಂದ ಇದುವರೆಗೆ 1 ಕೋಟಿ ಕುಟುಂಬದವರಿಗೆ ಅನ್ನ ಭಾಗ್ಯ ಯೋಜನೆಯ ಹಣ ಹಾಕಲಾಗಿದೆ ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಆರ್ಥಿಕವಾಗಿ ಅನುಕೂಲವಾಗಿದೆ ಎಂದಿದ್ದಾರೆ.

ಈ ವೇಳೆ ಮಾತನಾಡಿದಂತಹ ಅವರು ವೈಟ್ ಬೋರ್ಡ್ ಕಾರ್ ಇರುವವರಿಗೆ ಬಿಪಿಎಲ್ ಕಾರ್ಡ್ ನೀಡಲು ಸಾಧ್ಯವಾಗುವುದಿಲ್ಲ, ಎಲ್ಲೋ ಬೋರ್ಡ್ ಕಾರ್ ಇದ್ದವರಿಗೆ ಬಿಪಿಎಲ್ ಕಾರ್ಡ್ ನೀಡುವುದಾಗಿ ಸೂಚನೆಯನ್ನು ಹೊರಡಿಸಿದ್ದಾರೆ ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಲಾಗಿದೆ.

ಸಾಕಷ್ಟು ಜನರು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹತೆ ಇಲ್ಲದಿದ್ದರೂ ಸಹ ಸುಳ್ಳು ದಾಖಲಾತಿಗಳನ್ನು ನೀಡಿ ಕಾರ್ಡನ್ನು ಈಗಾಗಲೇ ಪಡೆದುಕೊಂಡಿದ್ದಾರೆ ಆದರೆ ಹೊಸದಾಗಿ ಕಾರ್ಡ್ ಗಳನ್ನು ಮಾಡಿಸುವಂತವರಿಗೆ ಈ ನಿಯಮ ಅನ್ವಯವಾಗುತ್ತದೆ ಎಂದು ಸರ್ಕಾರ ತಿಳಿಸಲಾಗಿದೆ

ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಹೊರ ಬಂದಿಲ್ಲದೆ ಇದ್ದರೂ ಸಹ ಇದು ಸುದ್ದಿಗೋಷ್ಠಿಯ ವೇಳೆ ಈ ಬಗ್ಗೆ ಚರ್ಚೆ ನಡೆಸಲಾಗಿದೆ ಮುಂದಿನ ದಿನಗಳಲ್ಲಿ ಈ ವಿಷಯದ ಬಗ್ಗೆ ತೀರ್ಮಾನವನ್ನು ತೆಗೆದುಕೊಂಡು ಸರ್ಕಾರವು ಬಿಪಿಎಲ್ ಕಾರ್ಡ್ ಗೆ ಸಂಬಂಧಿಸಿದಂತೆ ಸಾಕಷ್ಟು ನಿಯಮಗಳನ್ನು ಜಾರಿಗೆ ತಂದು ಯಾರಿಗೆಲ್ಲ ಆರ್ಥಿಕ ಸಹಾಯ ಬೇಕು ಅಂತಹವರಿಗೆ ಬಿಪಿಎಲ್ ಕಾರ್ಡನ್ನು ಒದಗಿಸಿಕೊಡಲಾಗುತ್ತದೆ.

ಈಗಾಗಲೇ ಬಿಪಿಎಲ್ ಕಾರ್ಡ್ ಹೊಂದಿರುವಂತಹ ಫಲಾನುಭವಿಗಳು ನಿಮ್ಮ ಬಳಿ ವೈಟ್ ಬೋರ್ಡ್ ಕಾರು ಇದ್ದರೆ ಮುಂದಿನ ದಿನಗಳಲ್ಲಿ ರದ್ದಾಗುವಂತಹ ಸಾಧ್ಯತೆ ಇದೆ. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ದೊರೆತರೆ ಒಳಿತು ಅರ್ಹತೆ ಇಲ್ಲದೆ ಇರುವವರು ಸಹ ಈ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬಾರದು ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ಸ್ ಮೂಲಕ ತಿಳಿಸಿ. ಹಾಗೆ ಈ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಬತ್ತಿ ತರದ ಶೇರ್ ಮಾಡಿ.

- Advertisment -