ವಾಹನ ಚಾಲಕ ಹುದ್ದೆಯನ್ನು ಅರಸುತ್ತಿರುವಂತಹ ಸಾಕಷ್ಟು ಜನರಿಗೆ ಸಂತಸದ ಸುದ್ದಿ ಇದೀಗ ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಾಹನ ಚಾಲಕ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗೆ ನೀವು ಸಹ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ.
ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಾಹನ ಚಾಲಕ ಹುದ್ದೆಗೆ ಬೇಕಾಗಿರುವ ವಯೋಮಿತಿ ನೋಡುವುದಾದರೆ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಅಂದರೆ 8-9-2023 ಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, 2a-2b, 3a-3b ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ಆಗಿರಬೇಕು.
ವೇತನ
ವೇತನದ ಬಗ್ಗೆ ತಿಳಿದು ಕೊಳ್ಳುವುದಾದರೆ ವಾಹನ ಚಾಲಕ ಹುದ್ದೆಗೆ ಒಳ್ಳೆಯ ವೇತನವನ್ನು ನೀಡಲಾಗುತ್ತದೆ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,400 ರೂಪಾಯಿಯಿಂದ 42,000 ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಹುದ್ದೆಗೆ ಆಯ್ಕೆ ವಿಧಾನ ನೋಡುವುದಾದರೆ
ಲಿಖಿತ ಪರೀಕ್ಷೆ ಅಥವಾ ಮೌಖಿಕ ಪರೀಕ್ಷೆ ಅಥವಾ ಈ ಎರಡು ವಿಧಾನಗಳನ್ನು ಅನುಸರಿಸಿ ಯೋಗ್ಯ ಅಭ್ಯರ್ಥಿಗಳ ಆಯ್ಕೆಯನ್ನು ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವಂತಹ ಸಂಪೂರ್ಣ ವಿಧಾನ
ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಅರ್ಜಿ ನಮೂನೆ-1 ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಅಂಚೆ ಮೂಲಕ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು. ಅರ್ಜಿ ನಮೂನೆಯು ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯುತ್ತದೆ.
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ಉಳಿದ ಸಾಮಾನ್ಯ ವರ್ಗದ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ರಾಸ್ ಮಾಡಿದ 500 ರೂಪಾಯಿ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವಂತೆ ಖರೀದಿಸಿ ಕಾರ್ಯದರ್ಶಿ ಕರ್ನಾಟಕ ವಿಧಾನ ಸಭೆ ಸಚಿವಾಲಯ ಮೊದಲನೇ ಮಹಡಿ ವಿಧಾನಸೌಧ ಬೆಂಗಳೂರು 560001 ವಿಳಾಸಕ್ಕೆ ಪಾವತಿ ಮಾಡಬೇಕು.
ಅರ್ಜಿ ಸಲ್ಲಿಸುವ ವಿಳಾಸ
ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ ಸಚಿವಾಲಯ ಅಂಚೆ ಪೆಟ್ಟಿಗೆ ಸಂಖ್ಯೆ 5074 ಮೊದಲನೇ ಮಹಡಿ. ವಿಧಾನಸೌಧ ಬೆಂಗಳೂರು 560001 ಈ ವಿಳಾಸಕ್ಕೆ ನೀವು ಅರ್ಜಿಯನ್ನು ಸಲ್ಲಿಸಬೇಕು.
ವಾಹನ ಚಾಲಕ ಹುದ್ದೆಗಳು ಖಾಲಿ ಇದ್ದು ಕಲ್ಯಾಣ ಕರ್ನಾಟಕ ಪ್ರದೇಶದ ಒಟ್ಟು 3 ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ. ಉದ್ಯೋಗ ಸ್ಥಳ ಬೆಂಗಳೂರು ವಿದ್ಯಾರ್ಹತೆ ಅಭ್ಯರ್ಥಿಗಳು ಏಳನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಇತ್ತೀಚಿನ ವಾಹನ ಚಾಲನ ಪರವಾಗಿ ಹೊಂದಿರಬೇಕು ಮೋಟಾರು ಕಾರು ಚಾಲನೆಯಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಸುವ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 5-8-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 8-9 2023
ಈ ಮಾಹಿತಿ ಇಷ್ಟ ಆದರೆ ತಪ್ಪದೆ ಲೈಕ್ ಮಾಡಿ ಮತ್ತು ಇತರರಿಗೂ ಶೇರ್ ಮಾಡಿ.