ಸರ್ಕಾರವು ಪ್ರಾರಂಭದಲ್ಲಿ ಅಡುಗೆ ಅನಿಲಕ್ಕೆ ಸಂಬಂಧಪಟ್ಟ ಹಾಗೆ ಸಬ್ಸಿಡಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿತ್ತು ಆದರೆ ಸ್ವಲ್ಪ ದಿನಗಳ ಕಾಲ ಸಬ್ಸಿಡಿ ಹಣವನ್ನು ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಅದೇ ಸಿಲಿಂಡರ್ ಗೆ 200 ರೂಪಾಯಿ ಸಬ್ಸಿಡಿ ಹಣವನ್ನು ನೀಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ.
ಹೌದು ಇದೀಗ ಕೇಂದ್ರ ಸರ್ಕಾರವು ಸಿಲಿಂಡರ್ ಗೆ ಸಂಬಂಧಪಟ್ಟ ಹಾಗೆ 200 ರೂಪಾಯಿ ಸಬ್ಸಿಡಿ ಹಣವನ್ನು ನೀಡಲು ತೀರ್ಮಾನ ತೆಗೆದುಕೊಂಡಿದೆ ಹಲವಾರು ವರ್ಷಗಳ ಹಿಂದೆ ಅಡಿಗೆ ಅನಿಲದ ಮೇಲಿನ ಸಬ್ಸಿಡಿಯನ್ನು ಹಿಂದೆ ತೆಗೆದುಕೊಂಡಿತ್ತು ಆದರೆ ಇದೀಗ ಮರು ನೀಡಿಕೆಯನ್ನು ಕೈಗೊಂಡಿದೆ
ಕೇಂದ್ರ ಸಚಿವ ಸಂಪುಟ ಪುನಃ ಸಬ್ಸಿಡಿಯನ್ನು ಕೊಡುವ ನಿರ್ಧಾರವನ್ನು ತೆಗೆದುಕೊಂಡಿದ್ದು ದೇಶದ ಎಲ್ಲಾ LPG ಗ್ರಾಹಕರಿಗೆ ಇದು ಅನ್ವಯಿಸುತ್ತದೆ ಇದರಿಂದಾಗಿ ವಾರ್ಷಿಕ ಸುಮಾರು 10 ಸಾವಿರ ಕೋಟಿ ರೂ ಆರ್ಥಿಕ ಹೊರೆಯಾಗಲಿದ್ದು ಈ ವರ್ಷದ ಅವಧಿಗೆ 7,680 ಕೋಟಿ ರೂಪಾಯಿ ವೆಚ್ಚ ತಗುಲುತ್ತದೆ. ಈ ವಿಷಯದ ಕುರಿತಾಗಿ ಮಾತನಾಡಿದಂತಹ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಕೇಂದ್ರ ಸಂಪುಟದ ನಿರ್ಧಾರಗಳನ್ನು ವಿವರಿಸಿದ್ದಾರೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಎಲ್ಲಾ ಗ್ರಾಹಕರಿಗೆ 200 ರೂಪಾಯಿಯಷ್ಟು ಇಳಿಸಲಾಗುತ್ತದೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ ಸಬ್ಸಿಡಿಯನ್ನು ಬ್ಯಾಂಕ್ ಖಾತೆಗಳಿಗೆ ಕಳಿಸಲಾಗುತ್ತದೆಯೇ ಅಥವಾ ಸಿಲಿಂಡರ್ ನ ಬೆಲೆಯಲ್ಲಿ ರಿಯಾಯಿತಿಯನ್ನು ಕೊಡಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟಣೆ ನೀಡಿಲ್ಲ.
ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ರೂಪಿಸಿರುವಂತಹ ಉಜ್ವಲ ಯೋಜನೆ ಅಡಿಯಲ್ಲಿ 75 ಲಕ್ಷ ಮಂದಿಗೆ ಉಚಿತ ಅನಿಲ ಸಂಪರ್ಕವನ್ನು ಕಲ್ಪಿಸಲಕೊಡಲಾಗುತ್ತದೆ ಉಜ್ವಲ ಯೋಜನೆಯ ಗ್ರಾಹಕರು ಪ್ರತಿ ಸಿಲಿಂಡರ್ ಗೆ ಒಟ್ಟು 400 ರೂಪಾಯಿ ಸಬ್ಸಿಡಿ ಪಡೆಯಲಿದ್ದಾರೆ ಕೇಂದ್ರ ಸರ್ಕಾರವು ಕೆಲವು ವರ್ಷಗಳ ಹಿಂದೆ ಗ್ರಾಹಕರಿಗೆ ನೀಡುತ್ತಿದ್ದಂತಹ ಬ್ಯಾಂಕ್ ಖಾತೆಗೆ ಒದಗಿಸುತ್ತಿದ್ದಂತಹ LPG ಸಬ್ಸಿಡಿ ಹಣವನ್ನು ಪಾವತಿಸುವುದನ್ನು ನಿಲ್ಲಿಸಿತ್ತು.
ಕಳೆದ ವರ್ಷ ಮೇ ತಿಂಗಳಿನಲ್ಲಿ ಪ್ರತಿ ಬ್ಯಾರೆಲ್ ಬೆಲೆ ಸುಮಾರು 118 ಡಾಲರ್ ತಲುಪಿದ ನಂತರ ಕಚ್ಚಾ ತೈಲ ಬೆಲೆಗಳು ಗಣನೀಯವಾಗಿ ಇಳಿದದ್ದರೂ ಸಹ ಎಲ್ಪಿಜಿ ಸಿಲಿಂಡರ್ ಬೆಲೆಗಳನ್ನು ಏಕೆ ಕಡಿತಗೊಳಿಸುತ್ತಿಲ್ಲ ಎಂದು ಕಳೆದ ತಿಂಗಳು ಸರ್ಕಾರವನ್ನು ಪ್ರಶ್ನಿಸಲಾಗಿದ್ದು ಕಳೆದ ಏಳು ತಿಂಗಳಿನಿಂದ ಕಚ್ಚಾ ತೈಲ ಬೆಲೆಯು 60 ರಿಂದ 80 ಡಾಲರ್ ವ್ಯಾಪ್ತಿಯಲ್ಲಿ ಇದೆ
ಆದರೂ ಸಹ ಸಿಲಿಂಡರಿನ ಮೇಲಿನ ಬೆಲೆಯನ್ನು ಕಡಿತಗೊಳಿಸಿಲ್ಲ ಸಬ್ಸಿಡಿ ಹಣವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹಾರ್ದಿಕ್ ಸಭೆಯಲ್ಲಿ ತಿಳಿಸಿದರು. ಈ ವಿಷಯದ ಕುರಿತಾಗಿ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ಸ್ ಮೂಲಕ ತಿಳಿಸಿ ಹಾಗೆ ಈ ಮಾಹಿತಿ ಇಷ್ಟ ಆದ್ರೆ ತಪ್ಪದೆ ಲೈಕ್ ಮಾಡಿ ಮತ್ತು ಇತರರಿಗೂ ಶೇರ್ ಮಾಡಿ.