ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಇನ್ನೂ ಹಲವಾರು ಗೊಂದಲಗಳು ಜನರಲ್ಲಿ ಕಾಡುತ್ತಿದೆ ಕರ್ನಾಟಕದಲ್ಲಿ ಸಾಕಷ್ಟು ಜನ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ಗಳನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಲ್ಲ ಇದು ಸಹ ಅವರ ಗೊಂದಲಕ್ಕೆ ಇನ್ನಷ್ಟು ಪುಷ್ಟಿ ನೀಡುತ್ತಿದೆ. ಸರ್ಕಾರವು ಜುಲೈ 19ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆಯನ್ನು ನೀಡಿದ್ದು ಆಗಸ್ಟ್ 16ರಂದು ಫಲಾನುಭವಿಗಳಿಗೆ ಹಣವನ್ನು ಅವರ ಖಾತೆಗೆ ವರ್ಗಾವಣೆಯ ಮಾಡುವ ಗುರಿಯನ್ನು ಹೊಂದಿದೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಹ ಇರುವಂತಹ ಮಹಿಳೆಯರು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು ಗೃಹಲಕ್ಷ್ಮಿ ಯೋಜನೆಗೆ ನೀವು ನೋಂದಣಿ ಮಾಡಿಕೊಳ್ಳಲು ಯಾವುದೇ ರೀತಿಯಾದಂತಹ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅವಶ್ಯಕತೆ ಇಲ್ಲ ಸರ್ಕಾರದ ವತಿಯಿಂದ ಎಲ್ಲಾ ಕೇಂದ್ರಗಳಿಗೂ ಸಹ ಒಂದು ಅರ್ಜಿಗೆ 12 ರೂಪಾಯಿಗಳಂತೆ ಹಣವನ್ನು ನೀಡಲಾಗುತ್ತದೆ
ಆದ್ದರಿಂದ ನೀವು ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಡಿ. ಕರ್ನಾಟಕ ಸರ್ಕಾರವು ಮನೆ ಯಜಮಾನಿ ಮಹಿಳೆಗೆ ಆರ್ಥಿಕ ನೆರವು ನೀಡಲು ಪ್ರಾರಂಭಿಸಿರುವಂತಹ ಯೋಜನೆ ಇದಾಗಿದ್ದು ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಮನೆಯ ಯಜಮಾನಿಯು ಸಹ ಲಾಭವನ್ನು ಪಡೆದುಕೊಳ್ಳಬಹುದಾಗಿದೆ ಈ ಆರ್ಥಿಕ ನೆರವಿನಿಂದ ತನ್ನ ಕುಟುಂಬವನ್ನು ಸರಿದೂಗಿಸಿಕೊಂಡು ಹೋಗುವಲ್ಲಿ ಮಹಿಳೆಯರು ಯಶಸ್ವಿಯಾಗಬೇಕು.
ಯಾವುದೇ ಮಧ್ಯವರ್ತಿಗಳ ಸಹಾಯವಿಲ್ಲದೆ ಯೋಜನೆಯಲ್ಲಿ ಫಲಾನುಭವಿಗಳು ಉಚಿತವಾಗಿ ನೋಂದಣಿ ಮಾಡಿಸಿಕೊಳ್ಳಬಹುದು ಸರ್ಕಾರವು ಗೊತ್ತು ಪಡಿಸಿದಂತಹ ಯಾವುದೇ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ನೊಂದಣಿ ಮಾಡಬಹುದು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹಲವಾರು ಗೊಂದಲಗಳು ಇನ್ನೂ ಕಾಡುತ್ತಿದೆ ಕೆಲವರು ಇನ್ನೂ ಸಹ ತಮ್ಮ ಆಧಾರ್ ಕಾರ್ಡ್ ಗಳನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಲ್ಲ.
ಇಲ್ಲಿ ಮುಖ್ಯವಾಗಿ ಗಮನಿಸುವ ವಿಷಯ ಏನೆಂದರೆ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಮಾಡಿಸಿದ ಮಾತ್ರಕ್ಕೆ ನೇರವಾಗಿ ನಿಮ್ಮ ಖಾತೆಗೆ ಹಣ ಬಂದು ಸೇರುವುದಿಲ್ಲ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಬಂದು ಸೇರಬೇಕು ಎಂದರೆ ಕಡ್ಡಾಯವಾಗಿ ನಿಮ್ಮ ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿರಲೇಬೇಕು ಹಲವಾರು ಸೇವಾ ಕೇಂದ್ರಗಳಲ್ಲಿ ಗಮನಿಸಿರುವ ಹಾಗೆ ನೋಂದಣಿ ಸಮಯದಲ್ಲಿ ಕೇವಲ ನಿಮ್ಮ ರೇಷನ್ ಕಾರ್ಡ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಜೊತೆಗೆ ಒಟಿಪಿ ಗಾಗಿ ಮೊಬೈಲ್ ನಂಬರ್ ಅನ್ನು ಮಾತ್ರ ಕೇಳಲಾಗುತ್ತಿದೆ.
ನಿಮ್ಮ ಅಕೌಂಟ್ ನಂಬರ್ ಅನ್ನು ಯಾವುದೇ ಕೇಂದ್ರಗಳಲ್ಲಿ ತೆಗೆದುಕೊಳ್ಳುತ್ತಿಲ್ಲ ಆದ್ದರಿಂದ ನಿಮ್ಮ ಆಧಾರ್ ಲಿಂಕ್ ಆಗಿರುವ ಖಾತೆಗೆ ಹಣ ಬರಬೇಕಾದರೆ ಈ ಕೂಡಲೇ ನೀವು ಆಧಾರ್ ಕಾರ್ಡನ್ನು ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಕೊಳ್ಳಬೇಕು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ನಿಮ್ಮ ಆಧಾರ್ ಕಾರ್ಡನ್ನು ಕೂಡಲೇ ಲಿಂಕ್ ಮಾಡಿಸಿಕೊಳ್ಳಿ.
ಗೃಹಲಕ್ಷ್ಮಿ ಯೋಜನೆಗೆ ಅಗತ್ಯವಾಗಿ ಬೇಕಾಗಿರುವಂತಹ ದಾಖಲೆಗಳು.
* ಎಪಿಎಲ್ ಕಾರ್ಡ್
* ಬಿಪಿಎಲ್ ಕಾರ್ಡ್
* ಅಂಥೋದೆಯ ಕಾರ್ಡ್ಪ
* ಬ್ಯಾಂಕಿಂಗ್ ಮಾಡಿದ ಆಧಾರ್ ಕಾರ್ಡ್
* ಫಲಾನುಭವಿಯ ಬ್ಯಾಂಕ್ ವಿವರಗಳು
* ಆಧಾರ್ ಲಿಂಕ್ ಮಾಡಿದ ಫೋನ್ ಸಂಖ್ಯೆ
ಇಷ್ಟು ದಾಖಲಾತಿಗಳನ್ನು ನೀವು ನಿಮ್ಮ ಹತ್ತಿರದ ಸೇವ ಕೇಂದ್ರಗಳಿಗೆ ತೆಗೆದುಕೊಂಡು ಹೋಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಯಾರೆಲ್ಲಾ ಬ್ಯಾಂಕ್ ಖಾತೆಗೆ ತಮ್ಮ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಿಲ್ಲ ಅಂತಹವರು ಈ ಕೂಡಲೇ ಲಿಂಕ್ ಮಾಡಿಸಿ ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿ ಹಣವನ್ನು ನಿಮ್ಮ ದಾಗಿಸಿಕೊಳ್ಳಿ. ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳು ನಮಗೆ ಕಮೆಂಟ್ಸ್ ಮೂಲಕ ತಿಳಿಸಿ.