ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ʻಗೃಹಜ್ಯೋತಿ ಯೋಜನೆʼಗೆ ಈಗಾಗಲೇ ಅರ್ಜಿ ಸಲ್ಲಿಕೆಗೆ ಜೂನ್ 18 ರಿಂದ ಆನ್ ಲೈನ್ನಲ್ಲಿ ಪ್ರಕ್ರಿಯೆ ಆಂಭವಾಗಿದೆ. ರಾಜ್ಯದಲ್ಲಿ ಇಲ್ಲಿ ತನಕ ಸರಿ ಸುಮಾರು ಒಂದೂವರೆ ಕೋಟಿ ಮಂದಿ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಿಗೆ ಗೊಂದಲವಿದ್ದು, ತಮ್ಮ ಅರ್ಜಿ ಸಲ್ಲಿಕೆಯಾಗಿದೆ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲು ರಾಜ್ಯ ಸರ್ಕಾರ ಅದಕ್ಕಾಗಿ ಪ್ರತ್ಯೇಕ ಲಿಂಕ್ ಅನ್ನು ಬಿಡುಗಡೆ ಮಾಡಿದೆ.
ಈ ಕೆಳಕಂಡ ಲಿಂಕ್ಗೆ ಭೇಟಿ ನೀಡಿ ನೀವು ನಿಮ್ಮ ಅರ್ಜಿ ಸಲ್ಲಿಕೆಯಾಗಿದೆಯಾ? ಇಲ್ಲವೇ? ಎನ್ನುವುದನ್ನು ಕಂಡು ಕೊಳ್ಳಬಹುದಾಗಿದೆ. ಒಂದು ವೇಳೆ ಅರ್ಜಿ ಸಲ್ಲಿಕೆಯಾಗಿದ್ದರೂ ಕೂಡ ಯಾವುದೇ ತೊಂದರೆ ಅನುಭವಸಿದರೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದೆ. https://sevasindhu.karnataka.gov.in/StatucTrack/Track_Status
ಗೃಹ ಜ್ಯೋತಿ ಯೋಜನೆಯ ಆನ್ ಲೈನ್ ಅರ್ಜಿ ಆಂಭವಾಗಿದೆ. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಬಹಳಷ್ಟು ಜನರಿಗೆ ಇನ್ನೂ ಅರ್ಜಿ ಸಲ್ಲಿಸಲು ಆಗುತ್ತಿಲ್ಲ. ರಾಜ್ಯದ ಗೃಹಬಳಕೆಯ ಗ್ರಾಹಕರಿಗೆ 200 ಯೂನಿಟ್ಗಳ ವರೆಗೆ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ 200 ಯುನಿಟ್ ವರೆಗಿನ ಉಚಿತ ವಿದ್ಯುತ್ ಪಡೆಯಲು ಮೊದಲಿಗೆ ಸೇವಾ ಸಿಂಧು ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಹೇಗೆ ಅರ್ಜಿ ಸಲ್ಲಿಸುವುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಿದ್ದೆವೆ.
ಗೃಹ ಜ್ಯೋತಿ ಅರ್ಜಿ ದಿನಾಂಕದ ಮಾಹಿತಿ
ಸೇವಾ ಸಿಂಧು ಪೋರ್ಟಲ್ ನಲ್ಲಿ ರಾಜ್ಯ ಜನರು ಏಕಕಾಲದಲ್ಲಿ ಅರ್ಜಿ ಸಲ್ಲಿಸುತ್ತಿರುವುದರಿಂದ ಸರ್ವರ್ ಸಮಸ್ಯೆ ಉಂಟಾಗುತ್ತಿದೆ. ಇದರಿಂದಾಗಿ ಫಲಾನುಭವಿಗಳು ಗೊಂದಲಕ್ಕೆ ಒಳಗಾಗಿದ್ದಾರೆ. ಆದರೆ, ಗೊಂದಲ ಮಾಡಿಕೊಳ್ಳಬೇಡಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಿಲ್ಲ ಎಂದು ಹೆಸ್ಕಾಂ ಎಂಡಿ ಮಹಮ್ಮದ್ ರೋಷನ್ ಮಾಹಿತಿ ನೀಡಿದ್ದಾರೆ.
ಗೃಹ ಜ್ಯೋತಿ ಅರ್ಜಿ ಸಲ್ಲಿಸುವುದು ಹೇಗೆ?
ಗೃಹ ಜ್ಯೋತಿ ಯೋಜನೆಯ ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದು. ಅರ್ಜಿ ಅಧಿಕೃತ ಲಿಂಕ್’ನ್ನು ಕೇಳಗೆ ನೀಡಲಾಗಿದೆ.
* ʻಗೃಹ ಜ್ಯೋತಿʼ ಯೋಜನೆ ಅಡಿಯಲ್ಲಿ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಗ್ರಾಹಕರು ಕೇಳಗೆ ನೀಡಿರುವ ಸೇವಾ ಸಿಂಧು ಪೋರ್ಟಲ್ ಲಿಂಕ್ (sevasindhugs.karnataka.gov.in gruhajyothi) ಮೇಲೆ ಕ್ಲಿಕ್ ಮಾಡಿ.
* ಅಲ್ಲಿ ʻಗೃಹ ಜ್ಯೋತಿ(Gruha Jyoti)ʼ ಎಂಬುದರ ಮೇಲೆ ಕ್ಲಿಕ್ ಮಾಡಿ.
* ಮುಂದಿನ ಲಿಂಕ್ನಲ್ಲಿ “ಗೃಹ ಜ್ಯೋತಿ” Gruha Jyoti Scheme ಆನ್ಲೈನ್ ಅರ್ಜಿ ಸಿಗುತ್ತದೆ.
* ನಂತರ ಅಲ್ಲಿ ಎಸ್ಕಾಂ ಹೆಸರು, Account ID/Connection ID, ನಿಮ್ಮ ಹೆಸರು, ವಿಳಾಸ (ವಿದ್ಯುತ್ ಬಿಲ್ನಲ್ಲಿರುವಂತೆ/ ಎಸ್ಕಾಂ ನಲ್ಲಿರುವಂತೆ) ವನ್ನು ಅಲ್ಲಿ ತುಂಬಿರಿ.
* ಆದಾದ ನಂತರ ನೀವು ಮಾಲಿಕರ ಅಥವಾ ಬಾಡಿಗೆದಾರರ ಎನ್ನುವುದನ್ನು ನಮೂದಿಸಬೇಕು, ನಿಮ್ಮ ಆಧಾರ ಸಂಖ್ಯೆ, ಆಧಾರ ಕಾರ್ಡ್ ನಲ್ಲಿ ಇರುವಂತೆ ನಿಮ್ಮ ಹೆಸರನ್ನು, ನಿಮ್ಮ ಮೊಬೈಲ್ ನಂಬರ್ ಭರ್ತಿ ಮಾಡಬೇಕು.
* I Agree ಅಂತ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಬೇಕು.
* ಕಡೆಯದಾಗಿ ʻWord verificationʼ ಅಂತ ಇರುವಲ್ಲಿ ಅಲ್ಲಿ ಕಾಣುವ ನಂಬರ್ʼನ್ನು ಕೇಳಗೆ ನೀಡಿರುವ ಬಾಕ್ಸʼನಲ್ಲಿ ತುಂಬಬೇಕು. ನಂತರ ʻSubmitʼ ಮೇಲೆ ಕ್ಲಿಕ್ ಮಾಡಿ. ಅಲ್ಲಿಗೆ ನಿಮ್ಮ ಅರ್ಜಿ ಸಲ್ಲಿಕೆ ಆಗುತ್ತದೆ. ಸ್ವೀಕೃತಿ ಪ್ರತಿಯನ್ನು ಡೌನ್’ಲೋಡ್ ಅಥವಾ ʻScreeShotʼ ತೆಗೆದುಕೊಳ್ಳಿ. ಸಾಧ್ಯವಾದರೆ ಅದನ್ನು ಪ್ರಿಂಟ್ ಮಾಡಿಕೊಳ್ಳಿ.