ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯೂ ಒಂದಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಕೆ ಯಾವಾಗ ಆರಂಭವಾಗಲಿದೆ ಎಂಬುದೇ ಅನೇಕ ಗೃಹ ಲಕ್ಷ್ಮಿಯರು ಕಾದು ಕುಳಿತಿದ್ದಾರೆ. ಆ ಬಗ್ಗೆ ಮಹತ್ವದ ಮಾಹಿತಿಯನ್ನು ಇಂದಿನ ಈ ಲೇಖನದಲ್ಲಿ ನೀಡಲಗುವುದು. ಕೊನೆವರೆಗೂ ಓದಿ ಸಂಪೂರ್ಣವಾಗಿ ಮಾಹಿತಿ ತಿಳಿದುಕೊಳ್ಳಿ…
ಜುಲೈ 16 ರಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೌದು, ಶುಕ್ರವಾರ(ಜುಲೈ 7) ಬಜೆಟ್ ಮಂಡನೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ, ʻಜುಲೈ 16 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಆಗಸ್ಟ್ 16 ಅಥವಾ 17 ರಂದು ಗೃಹಿಣಿಯರ ಖಾತೆಗೆ ಹಣ ಹಾಕಲಾಗುತ್ತದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ, ನುಡಿದಂತೆ ನಡೆದ ಸರ್ಕಾರ ನಮ್ಮದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ಜುಲೈ 16 ರಿಂದ ಆರಂಭವಾಗಲಿದ್ದು, ಆಗಸ್ಟ್ 16 ಅಥವಾ 17 ರಿಂದ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್‌ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗಲಿದೆ ಎಂದರು. ಬಜೆಟ್ನಲ್ಲೂ 5 ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಿದ್ದೇವೆ.
ರಾಜ್ಯ ಆರ್ಥಿಕವಾಗಿ ದಿವಾಳಿ ಆಗದಂತೆ ನೋಡಿಕೊಂಡಿದ್ದೇವೆ. 1.30 ಕೋಟಿ ಕುಟುಂಬದ ಯಜಮಾನಿಗೆ ‘ಗೃಹಲಕ್ಷ್ಮೀ’ ಹಣ ನೀಡುತ್ತೇವೆ. ಆಗಸ್ಟ್‌ನಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ. ಆಗಸ್ಟ್ 15 ಅಥವಾ 16ರಂದು ಮನೆ ಯಜಮಾನಿ ಖಾತೆಗೆ ಹಣ ಹಾಕಲಾಗುವುದು ಎಂದರು.
ಗೃಹ ಲಕ್ಷ್ಮಿ ಯೋಜನೆಗೆ ಅರ್ಹತಾ ಮಾನದಂಡಗಳು
* ಮಹಿಳೆಯರನ್ನು ಸಬಲೀಕರಣಗೊಳಿಸುವುದು ಕಾರ್ಯಕ್ರಮದ ಗುರಿಯಾಗಿದೆ, ಮತ್ತು ಪ್ರತಿ ಕುಟುಂಬಕ್ಕೆ ಒಬ್ಬ ಮಹಿಳೆ ಮಾತ್ರ ಅರ್ಜಿ ಸಲ್ಲಿಸಬಹುದು.
* ಈ ಕಾರ್ಯಕ್ರಮಕ್ಕೆ ಅರ್ಹರಾಗಲು, ಅರ್ಜಿದಾರರು ಕರ್ನಾಟಕದಲ್ಲಿ ವಾಸಿಸಿರಬೇಕು.
* ಯೋಜನೆಗೆ ಅರ್ಹರಾಗಲು ಅರ್ಜಿದಾರರು ಕುಟುಂಬದ ಯಜಮಾನಿಯಾಗಿರಬೇಕು.
* ಬಿಪಿಎಲ್-ಅಂತ್ಯೋದಯ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಗೃಹ ಲಕ್ಷ್ಮಿ ಯೋಜನೆಗೆ ಅಗತ್ಯ ದಾಖಲೆಗಳು
* ವಾಸಸ್ಥಳ ಪ್ರಮಾಣಪತ್ರ
* ಮೊಬೈಲ್ ಸಂಖ್ಯೆ
* 2 ಪಾಸ್ಪೋರ್ಟ್ ಗಾತ್ರದ ಛಾಯಾಚಿತ್ರಗಳು
* ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ವೋಟರ್ ಐಡಿ ಕಾರ್ಡ್ ಮುಂತಾದ ಗುರುತಿನ ಪುರಾವೆಗಳು
* ಪಡಿತರ ಚೀಟಿ, ನೀರಿನ ಬಿಲ್, ವಿದ್ಯುತ್ ಬಿಲ್ ಮುಂತಾದ ವಿಳಾಸ ಪುರಾವೆ
* ಬ್ಯಾಂಕ್ ಪಾಸ್ ಬುಕ್ ನಕಲು
* ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು.
ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿವುದು ಹೇಗೆ?
* ಮೊದಲನೆಯದಾಗಿ, ಯೋಜನೆಯ ಅಧಿಕೃತ ವೆಬ್ಸೈಟ್ಗೆ ಹೋಗಿ.
* ವೆಬ್ ಸೈಟ್ ನ ಮುಖಪುಟ ಪರದೆಯ ಮೇಲೆ ತೆರೆಯುತ್ತದೆ.
* ಕರ್ನಾಟಕ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ
* ಅದರ ನಂತರ, ಅರ್ಜಿ ನಮೂನೆಯ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
* ಈಗ, ವೈಯಕ್ತಿಕ ವಿವರಗಳು, ಬ್ಯಾಂಕ್ ವಿವರಗಳು ಮುಂತಾದ ಎಲ್ಲಾ ಅಗತ್ಯ ವಿವರಗಳೊಂದಿಗೆ ಫಾರ್ಮ್ ಅನ್ನು ಭರ್ತಿ ಮಾಡಿ.
* ಅದರ ನಂತರ, ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಫಾರ್ಮ್ ಗೆ ಲಗತ್ತಿಸಿ.
* ಈಗ, ಯಾವುದೇ ತಪ್ಪುಗಳನ್ನು ತಪ್ಪಿಸಲು ಅರ್ಜಿ ನಮೂನೆಯನ್ನು ಮರುಪರಿಶೀಲಿಸಿ.
ಅರ್ಜಿ ನಮೂನೆಯನ್ನು ಕರ್ನಾಟಕ ಗ್ರಾಮ ಪಂಚಾಯಿತಿ ಕೇಂದ್ರ ಅಥವಾ ಆಯಾ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಮತ್ತು ಪೂರಕ ದಸ್ತಾವೇಜನ್ನು ಅಧಿಕಾರಿಗಳು ಪರಿಶೀಲಿಸುತ್ತಾರೆ. ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡ ನಂತರ ನಗದು ಪ್ರೋತ್ಸಾಹಕ ಮೊತ್ತವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಪಾವತಿಸಲಾಗುತ್ತದೆ.