Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ಕೃಷಿ ಪಂಪ್ ಸೆಟ್ ಗೆ ಪ್ರತಿನಿತ್ಯ 5 ಗಂಟೆ ನಿರಂತರ ಕರೆಂಟ್ ನೀಡುವುದು ಕಡ್ಡಾಯ ಅಧಿಕಾರಿಗಳಿಗೆ ಖಡಕ್ ಸೂಚನೆ ಹೊರಡಿಸಿದ – ಸಿದ್ದರಾಮಯ್ಯ

Posted on October 18, 2023 By Admin No Comments on ಕೃಷಿ ಪಂಪ್ ಸೆಟ್ ಗೆ ಪ್ರತಿನಿತ್ಯ 5 ಗಂಟೆ ನಿರಂತರ ಕರೆಂಟ್ ನೀಡುವುದು ಕಡ್ಡಾಯ ಅಧಿಕಾರಿಗಳಿಗೆ ಖಡಕ್ ಸೂಚನೆ ಹೊರಡಿಸಿದ – ಸಿದ್ದರಾಮಯ್ಯ

 

ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿರುವುದರಿಂದ ಕಂಗಾಲಾಗಿರುವ ರೈತನಿಗೆ (Farmers) ಮಳೆ ಕೊರತೆ ಜೊತೆ ಜಮೀನಿಗೆ ಸರಬರಾಜು ಆಗುತ್ತಿದ್ದ ವಿದ್ಯುತ್ ನ ಕಣ್ಣಾಮುಚ್ಚಾಲೆಯ ಸಮಸ್ಯೆ ಎದುರಾಗುತ್ತು. ಲೋಡ್ ಶೆಡ್ಡಿಂಗ್ (Load shedding) ಸಮಸ್ಯೆ ಬಗ್ಗೆ ಮನವಿ ಮಾಡಿಕೊಂಡಿದ್ದ ರೈತರ ಅಹವಾಲವನ್ನು ಸ್ವೀಕರಿಸಿದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು (CM Siddaramaiah)

ಶುಕ್ರವಾರ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರೈತರಿಗೆ ಕೃಷಿ ಪಂಪ್ ಸೆಟ್ (Agricultural pumpset) ಬಳಕೆಗೆ ನಿತ್ಯ 5 ಗಂಟೆಗಳ ತಡೆರಹಿತ 3-ಫೇಸ್ ವಿದ್ಯುತ್ ಪೂರೈಕೆ ಮಾಡುವಂತೆ ಮುಖ್ಯಮಂತ್ರಿಗಳು ವಿವಿಧ ಎಸ್ಕಾಂಗಳ ವ್ಯವಸ್ಥಾಪಕ (ESCOM Direction) ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.

ವಿದ್ಯುತ್ ನ್ನು ವೈಜ್ಞಾನಿಕವಾಗಿ ಬೇರೆ ಬೇರೆ ಬ್ಯಾಚ್‌ಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ಆಯಾ ಭಾಗದ ರೈತನಿಗೆ ಯಾವ ಸಮಯದಲ್ಲಿ ಎಷ್ಟು ವಿದ್ಯುತ್ ಅವಶ್ಯಕತೆ ಇದೆ ಎನ್ನುವುದನ್ನು ಗಮನಿಸಿ ರೈತನಿಗೆ ಸಮಸ್ಯೆಯಾಗದಂತೆ ಆ ಸಮಯದಲ್ಲಿ ವಿದ್ಯುತ್ ಪೂರೈಕೆಗೆ ಮಾಡಬೇಕು. ಮೊದಲೇ ಹೀಗೆ ಮಾಡಿದ್ದರೆ ವಿದ್ಯುತ್ ಕೊರತೆಯ ಇದ್ದರೂ ರೈತರಿಗೆ ಸಮಸ್ಯೆ ಆಗದಂತೆ ನಿರ್ವಹಿಸಬಹುದಿತ್ತು.

ಅಧಿಕಾರಿಗಳು ಕಚೇರಿಯಲ್ಲೇ ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ, ಫೀಲ್ಢ್‌ಗೆ ಹೋಗಬೇಕು. ಪರಿಸ್ಥಿತಿಯನ್ನು ರೈತರಿಗೆ ಮನವರಿಕೆ ಮಾಡಿಸಿ ಅವರ ಸಮಸ್ಯೆಗಳನ್ನು ಆಲಿಸಬೇಕು ಪರಿಹರಿಸಲು ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಚಾರ್ಜ್ ಮಾಡಿದರು. ರಾಜ್ಯದ ಪ್ರತಿ ಜಿಲ್ಲೆಗೊಬ್ಬರು ಮುಖ್ಯ ಇಂಜಿನಿಯರ್ ಗಳನ್ನು ನೋಡಲ್ ಅಧಿಕಾರಿಗಳಾಗಿ (Nodel officer) ನೇಮಿಸಿ.

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ (District Incharge Minister Commitee) ರಚಿಸಿ ಇಂದಿನ ಸಭೆ ತೀರ್ಮಾನಗಳನ್ನು ಪಾಲಿಸುತ್ತಿದ್ದಾರೆಯೇ ಎನ್ನುವುದನ್ನು ಪರಿಶೀಲಿಸಿ ವರದಿ ನೀಡಬೇಕು ಎಂದು ತಾಕೀತು ಮಾಡಿದರು. ಸದ್ಯಕ್ಕಿರುವ ವಿದ್ಯುತ್ ಕೊರತೆ ನೀಗಿಸಲು ನವೆಂಬರ್‌ನಿಂದ ಉತ್ತರ ಪ್ರದೇಶದಿಂದ 300 ಮೆ.ವ್ಯಾ., ಪಂಜಾಬ್‌ನಿಂದ 600 ಮೆ.ವ್ಯಾ. ವಿದ್ಯುತ್‌ ಪಡೆಯಲಾಗುವುದು.

KERC ಅನುಮೋದನೆಯೊಂದಿಗೆ 1500 ಮೆಗಾವ್ಯಾಟ್‌ ಅಲ್ಪಾವಧಿ ವಿದ್ಯುತ್‌ ಖರೀದಿಗೆ (Short term electricity purchase) ಕ್ರಮ ಕೈಗೊಳ್ಳಲಾಗುವುದು, ರಾಷ್ಟ್ರೀಯ ವಿಪತ್ತಿನಡಿ ವಿದ್ಯುತ್ ಕಾಯ್ದೆ ಸೆಕ್ಷನ್ 11 (Electcity act Section 11) ಜಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ರೈತರಿಗೆ ವಿದ್ಯುತ್ ಕೊರತೆ ಆಗದಂತೆ ಆಕಸ್ಮಿಕ‌ ಸಂದರ್ಭಕ್ಕೆ ಅಗತ್ಯವಾದ ಯೋಜನೆ, ಸಿದ್ಧತೆ ಏಕೆ ಮಾಡಿಕೊಂಡಿಲ್ಲ.

ಹಿಂದಿನ ಸರ್ಕಾರ ವಿದ್ಯುತ್ ಉತ್ಪಾದನೆ ಮಾಡಲು ಅವಕಾಶ ಇತ್ತು ಆದರೂ ಮಾಡಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಮಳೆ ಇಲ್ಲದೆ ವಿದ್ಯುತ್ ಉತ್ಪಾದನೆ ಕುಂಠಿತ ಆಗಿದೆ ಇದನ್ನು ನಮ್ಮ ರೈತರಿಗೆ ಮನವರಿಕೆ ಮಾಡಬೇಕು ಎಂದು ಸಿಎಂ ತಿಳಿಸಿದರು. ನಾಲ್ಕೈದು ವರ್ಷಗಳಿಂದ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತದೆ ಆದರೆ ಬೇಡಿಕೆಗೆ ತಕ್ಕಂತೆ ಉತ್ಪಾದನೆ ಆಗುತ್ತಿಲ್ಲ.

ಕಲ್ಲಿದ್ದಲು ವ್ಯತ್ಯಯ ಜಲ ವಿದ್ಯುತ್ ಉತ್ಪಾದನೆ ನೀರಿನ ಕೊರತೆ ಮತ್ತಿತರ ಕಾರಣದಿಂದಾಗಿ ಉತ್ಪಾದನೆ ಕುಂಠಿತವಾಗಿದೆ ಇದನ್ನು ಬಗೆಹರಿಸುವುದರ ಬಗ್ಗೆ ರೈತ ತ್ವರಿತಗತಿಯಲ್ಲಿ ಅಧಿಕಾರಿಗಳು ತೀರ್ಮಾನ ತೆಗೆದುಕೊಳ್ಳಿ ಎಂದರು.ವಿದ್ಯುತ್ ಕಳ್ಳತನ ಮತ್ತು ವಿದ್ಯುತ್ ಸೋರಿಕೆ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ? ರಾಜ್ಯದಲ್ಲಿ ಉತ್ಪಾದನೆಯಾಗಿರುವ ವಿದ್ಯುತ್ತನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡಲು ನಿರ್ಬಂಧ ವಿಧಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ವಿಚಕ್ಷಣಾ ದಳದಲ್ಲಿ ಎಷ್ಟು SPಗಳು ಇದ್ದೀರಿ? ಏನು ಮಾಡುತ್ತಿದ್ದೀರಿ? ಇವರು ಎಷ್ಟು ವಿದ್ಯುತ್ ಕಳ್ಳತನ ಪತ್ತೆ ಹಚ್ಚಿದ್ದಾರೆ ಎನ್ನುವುದನ್ನು ನಿಗಾ ವಹಿಸಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಸೂಚನೆ ನೀಡಿ ಎಂದು ಎಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

Viral News

Post navigation

Previous Post: ಬಿಗ್ ಬಾಸ್ ಕಾರ್ಯಕ್ರಮ ನಿರೂಪಣೆ ಮಾಡಲು ಕಿಚ್ಚ ಸುದೀಪ್ ಪಡೆಯುವ ಸಂಭಾವನೆ ಎಷ್ಟು ಗೊತ್ತಾ.?
Next Post: ಹಸಿವು ಸೂಚ್ಯಂಕದಲ್ಲಿ ಪಾಕ್, ಬಾಂಗ್ಲಾ, ಶ್ರೀಲಂಕಕ್ಕಿಂತ ಭಾರತದ ಸ್ಥಿತಿ ಆತಂಕಕಾರಿ.!

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme