ಭಾರತೀಯರಿಗೆ ಆಧಾರ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಹೊಸ ಸಿಮ್ ಕಾರ್ಡ್ ಪಡೆಯಲು, ಬ್ಯಾಂಕ್ ಖಾತೆಯನ್ನು ತೆರೆಯಲು, ಪ್ಯಾನ್ ಕಾರ್ಡ್ ಬಳಸಲು ಅಥವಾ ಯಾವುದೇ ಸರ್ಕಾರದ ಯೋಜನೆಯ ಲಾಭ ಪಡೆಯಲು ಆಧಾರ್ ಅಗತ್ಯವಿದೆ. ಆಧಾರ್ನಿಂದ ಜನರಿಗೆ ಹಾಗೂ ಸರ್ಕಾರಕ್ಕೆ ಕೆಲಸ ಸುಲಭವಾಗಿದೆ ಆಧಾರ್ನೊಂದಿಗೆ ಪ್ಯಾನ್ ಲಿಂಕ್ ಮಾಡುವ ಗಡುವು ಈಗಾಗ್ಲೇ ಮುಗಿದಿದೆ.
ಈಗ ಮತ್ತೊಂದು ದಾಖಲೆಯನ್ನು ಆಧಾರ್ ಜೊತೆ ಲಿಂಕ್ ಮಾಡುವ ಅಗತ್ಯ ಬರಬಹುದು. ಆಸ್ತಿ ದಾಖಲೆಗಳನ್ನು ಆಧಾರ್ಗೆ ಲಿಂಕ್ ಮಾಡಬೇಕು ಎಂಬ ಬೇಡಿಕೆಯಿದೆ. ನಮ್ಮ ದೇಶದ ರಾಜ್ಯದ ಪ್ರತಿ ವ್ಯಕ್ತಿಯ ಬಳಿ ಆಧಾರ್ ಕಾರ್ಡ್ ಇರಲೇಬೇಕು. ಪ್ರತಿ ಕೆಲಸಕ್ಕೂ ಕೂಡ ಆಧಾರ್ ಕಾರ್ಡ್ ಖಂಡಿತವಾಗಿ ಬೇಕಾಗುತ್ತದೆ.. ಸರ್ಕಾರಕ್ಕೆ ಸಂಬಂಧಿಸಿದ ಕೆಲಸಗಳು ಅಥವಾ ಬೇರೆ ಕೆಲಸಗಳು ಇದ್ಯಾವುದು ಕೂಡ ಆಧಾರ್ ಕಾರ್ಡ್ ಇಲ್ಲದೆ ನಡೆಯುವುದಿಲ್ಲ.
ಹಾಗಾಗಿ ಆಧಾರ್ ಕಾರ್ಡ್ ಬಹಳ ಮುಖ್ಯವಾದ ಗುರುತಿನ ಚೀಟಿ ಆಗಿದೆ. ಆಧಾರ್ ಕಾರ್ಡ್ ಬಳಕೆಗೆ ಸಂಬಂಧಿಸಿದ ಹಾಗೆ UIDAI ಆಗಾಗ ಹೊಸ ನಿಯಮಗಳನ್ನು ಜಾರಿಗೆ ತರುತ್ತಲೇ ಇರುತ್ತದೆ. ಈ ನಿಯಮಗಳನ್ನು ಜನರು ಪಾಲಿಸಬೇಕಾಗುತ್ತದೆ.
ರೇಷನ್ ಕಾರ್ಡ್ (Ration Card) ಗೆ, ಪ್ಯಾನ್ ಕಾರ್ಡ್ (Pan Card) ಗೆ ಮತ್ತು ಇನ್ನಿತರ ದಾಖಲೆಗಳ ಜೊತೆಗೆ ಲಿಂಕ್ ಮಾಡಿಸಬೇಕು ಎಂದು ಸರ್ಕಾರ ತಿಳಿಸಿದೆ. ಅದರ ನಡುವೆಯೇ ಈಗ ಮತ್ತೊಂದು ಹೊಸ ನಿಯಮವನ್ನು ಜಾರಿಗೆ ತಂದಿದೆ. ಇನ್ನೊಂದು ದಾಖಲೆಯ ಜೊತೆಗೆ ನೀವು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಬೇಕಿದೆ. ಈಗ ಸರ್ಕಾರ ತಿಳಿಸಿರುವುದು ನಿಮ್ಮ ಆಸ್ತಿಗಳ ಡಾಕ್ಯುಮೆಂಟ್ ಗಳಿಗೆ (Property Documents) ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂದು ತಿಳಿಸಿದೆ.
ಅಶ್ವಿನ್ ಕುಮಾರ್ ಉಪಾಧ್ಯ (Ashwin Kumar Upadhya) ಅವರು ಈ ವಿಚಾರದ ಬಗ್ಗೆ ಮಾತನಾಡಿ, ಎಲ್ಲಾ ರೀತಿಯ ಸ್ಥಿರ ಆಸ್ತಿ ಮತ್ತು ಚರ ಆಸ್ತಿ ಯಾವುದೇ ಥರದ ಆಸ್ತಿ ಇದ್ದರು ಅದಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿರಬೇಕು ಎಂದು ತಿಳಿಸಲಾಗಿದೆ. ಈ ಹೊಸ ನಿಯಮ ಜಾರಿಗೆ ತಂದಿರುವುದಕ್ಕೆ ಒಂದು ಪ್ರಮುಖ ಕಾರಣ ಇದೆ.
ಇದರಿಂದ ಭ್ರಷ್ಟಾಚಾರ, ಕಪ್ಪುಹಣ ಮತ್ತು ಬೇನಾಮಿ ಆಸ್ತಿ ವಹಿವಾಟು ನಿಲ್ಲುತ್ತದೆ. ಈ ಸಂಬಂಧ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ವಿಚಾರದಲ್ಲಿ ಸರ್ಕಾರದಿಂದ ಉತ್ತರ ಕೇಳಿದೆ. ವಕೀಲ ಅಶ್ವಿನಿ ಉಪಾಧ್ಯಾಯ ಅವರು ದೆಹಲಿ ಹೈಕೋರ್ಟ್ನಲ್ಲಿ ಈ ಅರ್ಜಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರ, ಕಪ್ಪುಹಣ ಮತ್ತು ಬೇನಾಮಿ ಆಸ್ತಿ ವಿರುದ್ಧ ಕಠಿಣ ಕ್ರಮಗಳು ಅಗತ್ಯ ಎಂದು ವಾದಿಸಿದ್ದಾರೆ.
ಆಸ್ತಿ ದಾಖಲೆಗಳನ್ನು ಆಧಾರ್ಗೆ ಲಿಂಕ್ ಮಾಡಿದರೆ ಅಂತಹ ಪ್ರಕರಣಗಳನ್ನು ಸುಲಭವಾಗಿ ಹಿಡಿಯಬಹುದು ಅನ್ನೋದು ಇವರ ಅಭಿಪ್ರಾಯ. ನಾಗರಿಕರ ಆಸ್ತಿ ದಾಖಲೆಗಳನ್ನು ಅವರ ಆಧಾರ್ ಸಂಖ್ಯೆಗಳೊಂದಿಗೆ ಜೋಡಿಸಲು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ಸರ್ಕಾರಕ್ಕೆ ಪ್ರತಿಕ್ರಿಯೆ ನೀಡುವಂತೆ ಕೇಳಿದೆ. ಭ್ರಷ್ಟಾಚಾರ, ಕಪ್ಪುಹಣ ಮತ್ತು ಬೇನಾಮಿ ವಹಿವಾಟು ತಡೆಗೆ ಸಂಬಂಧಿಸಿದ ಅರ್ಜಿಗೆ ಉತ್ತರ ನೀಡಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ 4 ವಾರಗಳ ಕಾಲಾವಕಾಶ ನೀಡಿದೆ.
ಆಧಾರ್ ಕಾರ್ಡ್ ಆಸ್ತಿಪತ್ರದ ಜೊತೆಗೆ ಲಿಂಕ್ ಆಗುವುದು ಒಳ್ಳೆಯದು ಎಂದು ಅಶ್ವಿನ್ ಕುಮಾರ್ ಉಪಾಧ್ಯ ತಿಳಿಸಿದ್ದಾರೆ. ಈ ನಿಯಮವನ್ನು ಜಾರಿಗೆ ತರಬೇಕು ಎಂದು ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಇದೀಗ ಈ ನಿಯಮ ಜಾರಿಗೆ ಬಂದಿದೆ.
ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ಪೀಠವು ಹಣಕಾಸು, ಕಾನೂನು, ವಸತಿ ಮತ್ತು ನಗರ ವ್ಯವಹಾರಗಳು ಹಾಗೂ ಗ್ರಾಮೀಣಾಭಿವೃದ್ಧಿ ಸಚಿವಾಲಯಗಳಿಗೆ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಈ ವಿಷಯದ ಕುರಿತು ನ್ಯಾಯಾಲಯದಲ್ಲಿ ಮುಂದಿನ ವಿಚಾರಣೆ ಸೆಪ್ಟೆಂಬರ್ 5 ರಂದು ನಡೆಯಲಿದೆ.