Tuesday, October 3, 2023
Home News ಗೃಹ ಜ್ಯೋತಿ ಯೋಜನೆಯಲ್ಲಿ ದೊಡ್ಡ ಬದಲಾವಣೆ ನೀವು ಅರ್ಜಿ ಸಲ್ಲಿಸಿದರು ಸಹ ಉಚಿತ ವಿದ್ಯುತ್ ಸಿಗುವುದಿಲ್ಲ.?

ಗೃಹ ಜ್ಯೋತಿ ಯೋಜನೆಯಲ್ಲಿ ದೊಡ್ಡ ಬದಲಾವಣೆ ನೀವು ಅರ್ಜಿ ಸಲ್ಲಿಸಿದರು ಸಹ ಉಚಿತ ವಿದ್ಯುತ್ ಸಿಗುವುದಿಲ್ಲ.?

ನಮಸ್ಕಾರ ಸ್ನೇಹಿತರೆ ಇಂದಿನ ವಿಶೇಷ ಲೇಖನಕ್ಕೆ ತಮಗೆಲ್ಲರಿಗೂ ಸ್ವಾಗತ ಗೃಹ ಜ್ಯೋತಿ ಯೋಜನೆಯ ಕುರಿತಂತೆ ಇದೀಗ ರಾಜ್ಯ ಸರ್ಕಾರವು ಬಹುದೊಡ್ಡ ಬದಲಾವಣೆಯನ್ನು ತಂದಿದ್ದು ಇದರ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸುತ್ತೇವೆ. ಗೃಹ ಜ್ಯೋತಿ ಯೋಜನೆಗೆ ಈಗಾಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಪ್ರಾರಂಭವಾಗಿದೆ ನೀವು ಕೂಡ ಗೃಹ ಜ್ಯೋತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕು ಎಂದುಕೊಂಡಿದ್ದರೆ ಈ ಮಾಹಿತಿಯನ್ನು ಖಂಡಿತವಾಗಿಯೂ ತಿಳಿದುಕೊಳ್ಳಲೇಬೇಕು‌. ಅರ್ಜಿಯನ್ನು ಸಲ್ಲಿಸಿದರು ಕೂಡ ನಿಮಗೆ ಉಚಿತ ವಿದ್ಯುತ್ ವಿದ್ಯುತ್ ದೊರೆಯುವುದಿಲ್ಲ.

ಉಚಿತ ವಿದ್ಯುತ್ ಯಾಕೆ ಸಿಗುವುದಿಲ್ಲ ಎಂಬ ಮಾಹಿತಿಯನ್ನು ನಾವು ಈ ಕೆಳಕಂಡಂತೆ ತಿಳಿಸುತ್ತಿದ್ದೇವೆ.

* ಬಾಕಿ ಇರುವಂತಹ ವಿದ್ಯುತ್ ಬಿಲ್ಲನ್ನು ನೀವು ಸೆಪ್ಟೆಂಬರ್ 30ರ ಒಳಗಡೆ ಪಾವತಿಸಬೇಕು ಅಂದರೆ ಮೂರು ತಿಂಗಳ ಕಾಲಾವಕಾಶ ನಿಮಗೆ ನೀಡಲಾಗಿರುತ್ತದೆ ಈ ಅವಧಿಯಲ್ಲಿ ನೀವು ಪಾವತಿ ಮಾಡಿದರೆ ಮಾತ್ರ ನಿಮಗೆ ಈ ಯೋಜನೆಯ ಲಾಭ ದೊರೆಯುತ್ತದೆ.

* ಜುಲೈ ತಿಂಗಳಲ್ಲಿ ನೀವು ಅರ್ಜಿ ಸಲ್ಲಿಸಿದರೆ ಅಗಸ್ಟ್ ತಿಂಗಳಲ್ಲಿ ನಿಮಗೆ ಬಿಲ್ ನ ಪ್ರಯೋಜನ ದೊರೆಯುತ್ತದೆ ಹಾಗೆಯೇ ಜುಲೈ 25 ರಿಂದ ಆಗಸ್ಟ್ 25ರ ಒಳಗೆ ನೀವು ಅರ್ಜಿ ಸಲ್ಲಿಸಿದರೆ ಸೆಪ್ಟೆಂಬರ್ ತಿಂಗಳಿನಲ್ಲಿ ಯೋಜನೆಯ ಪ್ರಯೋಜನ ನಿಮಗೆ ಸಿಗುತ್ತದೆ.

* ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಬಾರದು 200 ಯುನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸಿಕೊಂಡರೆ ಪೂರ್ಣ ಪ್ರಮಾಣದ ವಿದ್ಯುತ್ ಬಿಲ್ಲನ್ನು ನೀವು ಪಾವತಿ ಮಾಡಬೇಕಾಗುತ್ತದೆ.

* ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25ರ ನಂತರ ಅರ್ಜಿಯನ್ನು ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಿನಲ್ಲಿ ಬರುವ ಬಿಲ್ ನಲ್ಲಿ ಪ್ರಯೋಜನ ಸಿಗುವುದಿಲ್ಲ ಆದರೆ ಯೋಚನೆಯ ಪ್ರಯೋಜನವನ್ನು ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ಪಡೆದುಕೊಳ್ಳುತ್ತಾರೆ.

ಇನ್ನು ಯಾರು ಅರ್ಜಿ ಸಲ್ಲಿಸಿಲ್ಲ ಅಂತಹವರು ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿ ವಿದ್ಯುತ್ ಫ್ರೀಯಾಗಿ ಬೇಕು ಎನ್ನುವವರು ಜುಲೈ 25ರ ಒಳಗೆ ಅರ್ಜಿಯನ್ನು ಸಲ್ಲಿಸಿದರೆ ಆಗಸ್ಟ್ ತಿಂಗಳಿನಲ್ಲಿ ನಿಮಗೆ ವಿದ್ಯುತ್ ಬಿಲ್ ಬರುವುದಿಲ್ಲ ಕಾಂಗ್ರೆಸ್‌ ಚುನಾವಣೆ ವೇಳೆ ಘೋಷಿಸಿದಂತೆ ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ತರುತ್ತಿದೆ. ಈಗಾಗಲೇ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ನೀಡುವ ಶಕ್ತಿ ಯೋಜನೆ ಪ್ರಾರಂಭವಾಗಿದೆ. ಅದರ ಬಳಿಕ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಕೂಡ ಆರಂಭವಾಗಿದೆ. 200 ಯೂನಿಟ್‌ ವರೆಗೂ ಉಚಿತ ವಿದ್ಯುತ್‌ ನೀಡುವ ಯೋಜನೆ ಇದಾಗಿದ್ದು, ಕಾಂಗ್ರೆಸ್‌ ಚುನಾವಣೆ ವೇಳೆ ಘೋಷಿಸಿದ ಮೊದಲ ಗ್ಯಾರಂಟಿ ಕೂಡ ಆಗಿದೆ. 12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ಗೃಹಜ್ಯೋತಿಯ ವಿದ್ಯುತ್​ ಉಚಿತ ನೀಡಲಾಗುತ್ತದೆ. 12 ತಿಂಗಳ ಸರಾಸರಿ ಬಳಕೆ 200 ಯುನಿಟ್ ಇದ್ದರೂ ಫ್ರಿ ವಿದ್ಯುತ್​ ಸಿಗಲಿದೆ.

12 ತಿಂಗಳ ಸರಾಸರಿಗಿಂತ ಹೆಚ್ಚು ಬಳಸಿದ್ರೆ ಮಾತ್ರ ಬಿಲ್ ಬರಲಿದೆ. 12 ತಿಂಗಳ ಸರಾಸರಿಯ ಬಿಲ್​ನಲ್ಲಿ 200 ಯುನಿಟ್ ಜೊತೆ 10 ಯುನಿಟ್ ಜಾಸ್ತಿಯಾದರೂ ಸಹ ಬಿಲ್ ಕಟ್ಟಬೇಕಿದೆ. ಇನ್ನು ಈ ಗೃಹಜ್ಯೋತಿ ಅರ್ಜಿ ಸಲ್ಲಿಕೆಯನ್ನ ಜೂನ್ 18 ರಿಂದ ಆರಂಭ ಮಾಡಲಾಗಿದ್ದು, ಗೃಹಜ್ಯೋತಿಯ ಫಲಾನುಭವಿಗಳು ಒಟ್ಟು 2.14 ಕೋಟಿಯಷ್ಟು ಜನರಿದ್ದಾರೆ. ಈ ಪೈಕಿ ಒಟ್ಟು 11 ದಿನಗಳಲ್ಲಿ ಒಟ್ಟು 8099932 ರಷ್ಟು ಜನರು ಅರ್ಜಿ ಹಾಕಿದ್ದಾರೆ. ಈ ಮಾಹಿತಿ ಇಷ್ಟ ಆದ್ರೆ ತಪ್ಪದೆ ಲೈಕ್ ಮಾಡಿ ಮತ್ತು ಇತರರಿಗೂ ಶೇರ್ ಮಾಡಿ ಹಾಗೆ ಈ ವಿಷಯದ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ಸ್ ಮೂಲಕ ತಿಳಿಸಿ.

- Advertisment -