ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ಈಗಾಗಲೇ ಸಾಕಷ್ಟು ಜನರು ಅಕ್ಕಿಯ ಹಣವನ್ನು ಪಡೆದುಕೊಂಡಿದ್ದಾರೆ ಇನ್ನು ಸಾಕಷ್ಟು ಜನರಿಗೆ ಯೋಜನೆಯ ಅಡಿಯಲ್ಲಿ ಹಣ ವರ್ಗಾವಣೆಯಾಗಿಲ್ಲ, ನಿಮ್ಮ ಖಾತೆಗೆ ಹಣ ಬಂದಿದ್ದೀಯೋ ಇಲ್ಲವೋ ಎಂದು ಕೂಡಲೇ ಚೆಕ್ ಮಾಡಿಕೊಳ್ಳಿ ಒಂದು ವೇಳೆ ನಿಮ್ಮ ಖಾತೆಗೆ ಹಣ ಬರದೆ ಇದ್ದರೆ ಏನು ಮಾಡಬೇಕು ಎಂಬಂತಹ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ.
ರಾಜ್ಯದಲ್ಲಿ ಅಕ್ಕಿಯ ಕೊರತೆಯಿಂದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಆ ಹಣವನ್ನು ಜಮಾ ಮಾಡಲು ಸರ್ಕಾರ ನಿರ್ಧಾರವನ್ನು ಕೈಗೊಂಡಿತ್ತು ಇದಕ್ಕೆ ಸಿದ್ದರಾಮಯ್ಯ ಅವರು ಸಹ ಚಾಲನೆಯನ್ನು ನೀಡಿದ್ದರು ಹಾಗೆಯೇ ಎಲ್ಲಾ ಬಿಪಿಎಲ್ ಕಾರ್ಡ್ ದಾರರಿಗೆ ಹಣವನ್ನು ವರ್ಗಾವಣೆ ಮಾಡಿದರು.
ಹಂತ ಹಂತವಾಗಿ ಈ ಹಣ ವರ್ಗಾವಣೆ ಆಗುತ್ತದೆ ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗಿದೆಯೇ ಎಷ್ಟು ಹಣ ಬಂದಿದೆ ಯಾರ ಖಾತೆಗೆ ಹಣ ವರ್ಗಾವಣೆ ಆಗುತ್ತದೆ ಎಂದು ನೀವು ತಿಳಿಯಲು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಿಳಿದುಕೊಳ್ಳಬಹುದು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಈಗಾಗಲೇ ಒಂದು ಕೋಟಿ ಕುಟುಂಬಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ.
ಸುಮಾರು 566 ಕೋಟಿ ಹಣವನ್ನು ವರ್ಗಾಯಿಸಿದ್ದಾರೆ ಎಂದು ಸಚಿವ ಮುನಿಯಪ್ಪ ಅವರು ತಿಳಿಸಿದ್ದಾರೆ ರಾಜ್ಯದಲ್ಲಿ 1.28 ಕೋಟಿ ಪಡಿತರ ಚೀಟಿ ಕುಟುಂಬಗಳಲ್ಲಿ 4.42 ಕೋಟಿ ಫಲಾನುಭವಿಗಳು ಇದ್ದಾರೆ. ಇದುವರೆಗೆ ಒಂದು ಕೋಟಿ ಕುಟುಂಬಗಳಿಗೆ 566 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಲಾಗಿದೆ ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
3,40,425 ಫಲಾನುಭವಿಗಳಿಗೆ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇಲ್ಲ, 19,02,725 ಪಡಿತರ ಚೀಟಿಗಳಿಗೆ ಆಧಾರ್ ಕಾರ್ಡ್ ಜೋಡಣೆ ಆಗಿಲ್ಲ ಮತ್ತು ಅನರ್ಹ ಪಡಿತರ ಚೀಟಿ ಆಗಿವೆ ಇವರಿಗೆ ಹಣ ಖಾತೆಗೆ ಹಾಕಿಲ್ಲ ಎಂದು ಮಾಹಿತಿಯನ್ನು ನೀಡಿದ್ದಾರೆ ಇನ್ನು ಕೆಲವರ ಖಾತೆಗೆ ಮಾತ್ರ ಈ ಹಣ ಬಂದಿಲ್ಲ ಇದರ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ಕೂಡ ಇಲ್ಲ
ಆಧಾರ್ ಕಾರ್ಡ್ ರೇಷನ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಲಿಂಕ್ ಆಗಿದ್ದರೂ ಕೂಡ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ ಎನ್ನುವಂತಹ ಆತಂಕ ಹಲವರಲ್ಲಿ ಸೃಷ್ಟಿಯಾಗಿದೆ ಈ ಗೊಂದಲವನ್ನು ಎಲ್ಲಿ ಪರಿಹರಿಸಿ ಪರಿಹರಿಸಿಕೊಳ್ಳಬೇಕು ಎಂದು ಜನರು ತಿಳಿಯದೆ ಕೂತಿದ್ದಾರೆ.
ಅನ್ನಭಾಗ್ಯ ಯೋಜನೆಯ ಹಣವನ್ನು ಪಡೆದುಕೊಳ್ಳಲು ನೀವು ಈ ಕೆಲಸಗಳನ್ನು ಕಡ್ಡಾಯವಾಗಿ ಮಾಡಿರಲೇಬೇಕು.
° ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಜೋಡಣೆ ಆಗಿರಬೇಕು ° ° ನಿಮ್ಮ ಅಕೌಂಟ್ಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು
° ಪಡಿತರ ಚೀಟಿಯಲ್ಲಿ ಇರುವ ಮುಖ್ಯಸ್ಥನ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆದಿರಬೇಕು
ಸರ್ಕಾರವು ಈ ಮೊದಲೇ ತಿಳಿಸಿರುವ ಹಾಗೆ ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿರುವ ಆಧಾರ್ ಜೋಡಣೆ ಆಗದೆ ಇರುವಂತಹ ಪಕ್ಷದಲ್ಲಿ ನಿಮಗೆ ಹಣ ಬರಲು ಸಾಧ್ಯವಿಲ್ಲ ಎಂದು ತಿಳಿಸಿತ್ತು. ಹಾಗಾಗಿ ಅನ್ನಭಾಗ್ಯ ಹಣದ ಸ್ಟೇಟಸ್ ಅನ್ನು ತಿಳಿದುಕೊಂಡು ಈಗಾಗಲೇ ತಿದ್ದುಪಡಿ ಇದ್ದಲ್ಲಿ ಅಥವಾ ಜೋಡಣೆ ಮಾಡುವುದು ಬಾಕಿ ಇದ್ದಲ್ಲಿ ಈಗಾಗಲೇ ಎಲ್ಲಾ ಕೆಲಸವನ್ನು ಮುಗಿಸಿಕೊಂಡು ಮುಂದಿನ ತಿಂಗಳ ಹಣವನ್ನು ನೀವು ಪಡೆದುಕೊಳ್ಳಬಹುದು ಎಂದು ತಿಳಿಸಿದಾಗಿದೆ. ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ಸ್ ಮೂಲಕ ತಿಳಿಸಿ.