ಶಕ್ತಿ ಯೋಜನೆಯ ಅಡಿಯಲ್ಲಿ ಎಲ್ಲಾ ಮಹಿಳೆಯರಿಗೂ ಸಹ ಉಚಿತ ಬಸ್ ಪ್ರಯಾಣವನ್ನು ಕರ್ನಾಟಕ ರಾಜ್ಯ ಸರ್ಕಾರ ಕಲ್ಪಿಸಿಕೊಡಲಾಗಿತ್ತು. ಉಚಿತ ಬಸ್ ಪ್ರಯಾಣಕ್ಕಾಗಿ ಸ್ಮಾರ್ಟ್ ಕಾರ್ಡ್ ಕೊಡಲು ನಿರ್ಧಾರವನ್ನು ಕೈಗೊಂಡಿತ್ತು ಆದರೆ ಇದೀಗ ಬಸ್ ಪಾಸ್ ನೀಡಲು ನಿರ್ಧರಿಸಿದೆ ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ.
ಕಾಂಗ್ರೆಸ್ ಸರ್ಕಾರದ 5 ದಾರಿ ಗ್ಯಾರಂಟಿ ಯೋಜನೆಗಲ್ಲಿ ಶಕ್ತಿ ಯೋಜನೆಯ ಒಂದಾಗಿದ್ದು ಈ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಕಲ್ಪಿಸಿಕೊಡಲಾಗಿತ್ತು. ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವಂತಹ ದೃಷ್ಟಿಯಿಂದ ಈ ರೀತಿಯಾದಂತಹ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ
ಉಚಿತ ಬಸ್ ಪ್ರಯಾಣಕ್ಕಾಗಿ ಸ್ಮಾರ್ಟ್ ಕಾರ್ಡ್ ಬದಲಾಗಿ ಸಾಮಾನ್ಯ ಬಸ್ ಪಾಸ್ ಅನ್ನು ನೀಡಬೇಕೆಂದು ಸರ್ಕಾರ ನಿರ್ಧಾರವನ್ನು ಕೈಗೊಂಡಿದೆ. ಶಕ್ತಿ ಯೋಜನೆಯು ಚಾಲನೆ ಪಡೆದುಕೊಂಡಂತಹ ಸಂದರ್ಭದಲ್ಲಿ ಸಾಂಕೇತಿಕವಾಗಿ ಕೆಲವೊಬ್ಬರು ಮಹಿಳೆಯರಿಗೆ ರಾಜ್ಯ ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗಿತ್ತು.
ಮೂರು ತಿಂಗಳ ಒಳಗಾಗಿಯೇ ಫಲಾನುಭವಿ ಮಹಿಳೆಯರು ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಬಹುದು ಎಂದು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿತು ಆದರೆ ಈಗ ಸ್ಮಾರ್ಟ್ ಕಾರ್ಡ್ ಬದಲು ಸಾಮಾನ್ಯ ಬಸ್ ಪಾಸ್ಸನ್ನೇ ನೀಡುವುದಾಗಿ ಸೂಚನೆಯನ್ನು ಹೊರಡಿಸಿದೆ.
ಜೂನ್ 11ರಂದು ಕರ್ನಾಟಕ ಸರ್ಕಾರ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು ಅಂದರೆ ಈ ಯೋಜನೆಯ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೂ ಸಹ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ಕಲ್ಪಿಸಿಕೊಡಲಾಗಿತ್ತು. ವಿದ್ಯಾರ್ಥಿನಿಯರನ್ನು ಸೇರಿದಂತೆ ರಾಜ್ಯದ ಎಲ್ಲಾ ಮಹಿಳೆಯರು ಶಕ್ತಿ ಯೋಜನೆಯಡಿಯಲ್ಲಿ ಉಚಿತ ಪ್ರಯಾಣವನ್ನು ಬೆಳೆಸಬಹುದಾಗಿದೆ.
ರಾಜ್ಯ ಸರ್ಕಾರ ಬಸ್ ಪಾಸ್ ಅನ್ನು ಏಕೆ ವಿತರಿಸುತ್ತದೆ ಎಂದರೆ ಮುಂದಿನ ತಿಂಗಳಿನಿಂದ ಶಕ್ತಿ ಸ್ಮಾರ್ಟ್ ಕಾರ್ಡ್ ಇಲ್ಲದೆ ಇದ್ದರೆ ಉಚಿತ ಬಸ್ ಸಂಚಾರ ಮಾಡಲು ಸಾಧ್ಯವಿಲ್ಲ ಎಂಬ ಆ’ತಂ’ಕ ಜನರಲ್ಲಿ ಶುರುವಾಗಿದೆ ಇದೀಗ ಸಾರಿಗೆ ಸಚಿವರು ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದಾರೆ ಸ್ಮಾರ್ಟ್ ಕಾರ್ಡ್ ಅನ್ನು ಅಭಿವೃದ್ಧಿಪಡಿಸಲು ಸೆಂಟರ್ ಫಾರ್ ಈ ಆಡಳಿತ ನಿರಾಕರಿಸಿದ್ದರಿಂದ ಸಾಮಾನ್ಯ ಬಸ್ ಪಾಸ್ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸೂಚನೆ ನೀಡಿದ್ದಾರೆ.
ಈ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸುಮಾರು 3 ಕೋಟಿ ಸ್ಮಾರ್ಟ್ ಕಾರ್ಡ್ ತಯಾರಿ ಮಾಡಲು ನಾವು ಸಿಇಜಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಡೆಸಿದ್ದೆವು ಆದರೆ ಇಷ್ಟೊಂದು ಪ್ರಮಾಣದಲ್ಲಿ ಸ್ಮಾರ್ಟ್ ಕಾರ್ಡ್ ತಯಾರಿಸಲು ಸಿಇಜಿ ಹಿಂದೆಟು ಹಾಕಿದ ಕಾರಣವಾಗಿ ಸಾಮಾನ್ಯ ಬಸ್ ಬಸ್ ಪಾಸ್ ಅನ್ನು ನೀಡಲು ಇದೀಗ ಸರ್ಕಾರ ತೀರ್ಮಾನವನ್ನು ಕೈಗೊಂಡಿದೆ.
ಜೂನ್ 11 ರಿಂದ ಆಗಸ್ಟ್ 9 ರವರೆಗೆ ರಾಜ್ಯ ಸರ್ಕಾರಿ ಬಸ್ ಗಳಲ್ಲಿ ಬರೋಬ್ಬರಿ 11,04,99,163 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ ಈ ಮಹಿಳಾ ಪ್ರಯಾಣಿಕರ ಒಟ್ಟು ಟಿಕೆಟ್ ಮೌಲ್ಯ 8,39,81,98,874 ಆಗಿದೆ. ಸರ್ಕಾರವು ಶಕ್ತಿ ಯೋಜನೆಯನ್ನು ಇನ್ನಷ್ಟು ಜನಪ್ರಿಯಗೊಳಿಸಲು ಇದೀಗ ಬಸ್ ಪಾಸ್ ನೀಡಲು ಮುಂದಾಗಿದೆ ಬಸ್ ಪಾಸ್ ಗಳನ್ನು ಸಾರಿಗೆ ಸಂಸ್ಥೆಗಳ ಮೂಲಕ ವಿತರಿಸಲಾಗುತ್ತದೆಯೋ ಅಥವಾ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬೇಕಿದೆ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ. ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ಸ್ ಮೂಲಕ ತಿಳಿಸಿ ಹಾಗೆ ಈ ಮಾಹಿತಿ ಇಷ್ಟ ಆದರೆ ತಪ್ಪದೇ ಲೈಕ್ ಮಾಡಿ ಮತ್ತು ಇತರರಿಗೂ ಶೇರ್ ಮಾಡಿ.