ರೇಷನ್ ಕಾರ್ಡ್ ಗೆ ಸಂಬಂಧಪಟ್ಟ ಹಾಗೆ ಜನರಲ್ಲಿ ಅನೇಕ ರೀತಿಯಾದಂತಹ ಗೊಂದಲಗಳು ಏರ್ಪಟ್ಟಿದೆ ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್ ಮುಖ್ಯವಾದಂತಹ ದಾಖಲಾತಿಯಾಗಿದ್ದು ಈ ರೇಷನ್ ಕಾರ್ಡ್ ನಲ್ಲಿ ಕೆಲವೊಬ್ಬರಿಗೆ ತಿದ್ದುಪಡಿಗೆ ಅವಕಾಶವನ್ನು ಕಲ್ಪಿಸಿ ಕೊಟ್ಟಿದೆ
ರೇಷನ್ ಕಾರ್ಡಿನಲ್ಲಿ ಹೆಸರು ಸೇರ್ಪಡೆ ಮಾಡುವುದು ಹಾಗೆ ಹೆಸರನ್ನು ತೆಗೆದುಹಾಕುವುದು, ರೇಷನ್ ಕಾರ್ಡ್ ಅಂಗಡಿ ಬದಲಾವಣೆ, ಹೆಸರು ತಿದ್ದುಪಡಿ, ಫೋಟೋ ಬದಲಾವಣೆ ಮಾಡಲಾಗುತ್ತದೆ ಈ ರೀತಿಯಾದಂತಹ ಯಾವುದೇ ಬದಲಾವಣೆಗಳನ್ನು ನೀವು ಇದೀಗ ಮಾಡಿಸಿಕೊಳ್ಳಬಹುವುದು ಅರ್ಹ ನಾಗರೀಕರಿಗೆ ಸದುಪಯೋಗವಾಗುವಂತಹ ದೃಷ್ಟಿಯನ್ನು ಒಳಗೊಂಡು ರೇಷನ್ ಕಾರ್ಡ್ ತಿದ್ದುಪಡಿಯನ್ನು ನಡೆಸಲಾಗುತ್ತಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ.
ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಯಲ್ಲಿ ಇರುವಂತಹ ವಿವರಗಳು ಯಾವುದೇ ರೀತಿಯ ತಪ್ಪು ಕಂಡು ಬಂದರೆ ಅದನ್ನು ಸರಿಪಡಿಸಿಕೊಳ್ಳಬೇಕು ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತಿತರ ದಾಖಲಾತಿಗಳನ್ನು ಹಿಡಿದು ಸೇವ ಕೇಂದ್ರಗಳಿಗೆ ಹಾಗೂ ಸರಕಾರಿ ಕಚೇರಿಗಳಿಗೆ ತೆಗೆದುಕೊಂಡು ಹೋಗಿ ತಿದ್ದುಪಡಿ ಮಾಡಿಸಲು ಮುಂದಾಗಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅನುಕೂಲವಾಗಬೇಕು ಎನ್ನುವಂತಹ ದೃಷ್ಟಿಯಿಂದ ಇದೀಗ ಪಡಿತರ ಚೀಟಿಯಲ್ಲಿನ ತಿದ್ದುಪಡಿಗೆ ಅವಕಾಶವನ್ನು ಸರ್ಕಾರ ಕಲ್ಪಿಸಿಕೊಟ್ಟಿದೆ ನಿಮ್ಮ ಪಡಿತರ ಚೀಟಿಯಲ್ಲಿ ಯಾವುದಾದರೂ ತಪ್ಪುಗಳಿದ್ದು ಗೃಹಲಕ್ಷ್ಮಿ ಅಥವಾ ಇನ್ನಿತರ ಯಾವುದೇ ಸರ್ಕಾರದ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಲು ತಡವಾಗುತ್ತಿದ್ದರೆ ಈಗ ಪಡಿತರ ಚೀಟಿಯ ತಪ್ಪುಗಳನ್ನು ತಿದ್ದುಪಡಿ ಮಾಡಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾದ ಅವಕಾಶವನ್ನು ಒದಗಿಸಿಕೊಡಲಾಗಿದೆ.
ರೇಷನ್ ಕಾರ್ಡ್ ತಿದ್ದುಪಡಿಗೆ 16ನೇ ತಾರೀಖಿನಿಂದ ಅವಕಾಶವನ್ನು ಒದಗಿಸಿಕೊಡಲಾಗಿದೆ. ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರವು ದಿನಾಂಕ ಹಾಗೂ ಸಮಯವನ್ನು ಗುರುತು ಮಾಡಿದೆ ಈ ಸಮಯದಲ್ಲಿ ನೀವು ತಿದ್ದುಪಡಿ ಮಾಡಿಸಿಕೊಳ್ಳಬಹುದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹಾಗೂ ದಿನಾಂಕ 16-8-2023 ರಿಂದ 19-8-2023 ರವರೆಗೆ ಅವಕಾಶವನ್ನು ನೀಡಲಾಗಿದೆ ಈ ಸಮಯದಲ್ಲಿ ನೀವು ತಿದ್ದುಪಡಿಯನ್ನು ಮಾಡಿಸಿಕೊಳ್ಳಬಹುದು
ಪಡಿತರ ಚೀಟಿಯ ತಿದ್ದುಪಡಿಗೆ ಕೇವಲ ನಾಲ್ಕು ದಿನಗಳ ಕಾಲ ಮಾತ್ರ ಅವಕಾಶ ಇರುತ್ತದೆ ಈ ಅವಕಾಶವನ್ನು ನೀವು ಸದುಪಯೋಗ ಮಾಡಿಕೊಂಡು ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ತಿದ್ದುಪಡಿ ಮಾಡಿಸಿಕೊಳ್ಳಿ
ಇದಕ್ಕೆ ಬೇಕಾದಂತಹ ಮುಖ್ಯ ದಾಖಲಾತಿಗಳು.
* ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
* 5 ವರ್ಷದ ಒಳಗಿನ ಮಕ್ಕಳು ಇದ್ದರೆ ಅವರ ಆಧಾರ್ ಕಾರ್ಡ್ ಹಾಗೂ ಜನನ ಪ್ರಮಾಣ ಪತ್ರ
ಇಷ್ಟು ದಾಖಲಾತಿಗಳನ್ನು ನೀವು ತೆಗೆದುಕೊಂಡು ಹೋಗಿ ಸೇವಾ ಕೇಂದ್ರಗಳಲ್ಲಿ ತಿದ್ದುಪಡಿಯನ್ನು ಮಾಡಿಸಿಕೊಳ್ಳಬಹುದು ರೇಷನ್ ಕಾರ್ಡ್ ಗೆ ಸಂಬಂಧಪಟ್ಟ ಹಾಗೆ ಯಾವುದೇ ಸರಿ ತಪ್ಪುಗಳು ಇದ್ದರೂ ಅದನ್ನು ನೀವು ಈ ಕೂಡಲೇ ಸರಿಪಡಿಸಿಕೊಳ್ಳಿ ಏಕೆಂದರೆ ಸರ್ಕಾರವು ಕಡಿಮೆ ಸಮಯವನ್ನು ನೀಡಿರುವುದರಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನೀವು ಪಡೆದುಕೊಳ್ಳಬೇಕಾದರೆ ರೇಷನ್ ಕಾರ್ಡ್ ಮುಖ್ಯವಾದಂತಹ ದಾಖಲಾತಿ ಆಗಿದೆ ಈ ವಿಷಯದ ಕುರಿತು ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ಸ್ ಮೂಲಕ ತಿಳಿಸಿ ಎಲ್ಲರಿಗೂ ಶೇರ್ ಮಾಡಿ.