ಕಾಂಗ್ರೆಸ್ ಸರ್ಕಾರವು ಚುನಾವಣೆಗು ಮುಂಚಿತವಾಗಿಯೇ ರಾಜ್ಯದಲ್ಲಿ ಐದು ಮಹತ್ವದ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಭರವಸೆಯನ್ನು ನೀಡಿದ್ದು ಅದೇ ರೀತಿಯಲ್ಲಿ ಚುನಾವಣೆಯಲ್ಲಿ ಗೆದ್ದ ನಂತರ ಇದೀಗ ತಮ್ಮ 5 ಭರವಸೆಯನ್ನು ಜಾರಿಗೆ ತರುವಲ್ಲಿ ಮುಂದಾಗಿದೆ ಅದರಲ್ಲಿ ಗೃಹ ಲಕ್ಷ್ಮಿ ಯೋಜನೆ ಹಾಗೂ ಶಕ್ತಿ ಸ್ಮಾರ್ಟ್ ಕಾರ್ಡ್ ಅಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಒದಗಿಸಿ ಕೊಡುವಲ್ಲಿ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಇಂದಿನಿಂದಲೇ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಮೂಲಕ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು ನೀವು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮನೆಯಲ್ಲಿ ಇರುವಂತಹ ಯಜಮಾನಿ ಒಬ್ಬರಿಗೆ 2000 ರೂ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ ಅದೇ ರೀತಿಯಲ್ಲಿ ಶಕ್ತಿ ಸ್ಮಾರ್ಟ್ ಕಾರ್ಡ್ ನ ಮೂಲಕ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಬಹುದು ಎಂದು ತಿಳಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಸೇವಾ ಸಿಂಧು ಪೋರ್ಟಲ್ ಮೂಲಕ, ಗ್ರಾಮ ಒನ್, ಕರ್ನಾಟಕ್ ಒನ್ ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಗೃಹ ಲಕ್ಷ್ಮಿ ಯೋಜನೆಗೆ ಆಫ್ಲೈನ್ ಮೂಲಕ ನಾಡಕಚೇರಿಗೆ ಹೋಗಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಶಕ್ತಿ ಸ್ಮಾರ್ಟ್ ಕಾರ್ಡ್ ಅನ್ನು ನೀವು ಸೇವಾ ಸಿಂಧು ಅಥವಾ ಗ್ರಾಮ ಒನ್ ಕರ್ನಾಟಕದಲ್ಲಿ ಹೋಗಿ ಅರ್ಜಿ ಸಲ್ಲಿಸಿ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಬಹುದಾಗಿದೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲಾತಿಗಳು ಈ ಕೆಳಕಂಡಂತಿವೆ
* ರೇಷನ್ ಕಾರ್ಡ್
* ಆಧಾರ್ ಕಾರ್ಡ್
* ವೋಟರ್ ಐಡಿ ಕಾರ್ಡ್
* ಪತಿಯ ವೋಟರ್ ಐಡಿ ಕಾರ್ಡ್ ಮತ್ತು ಆಧಾರ್ ಕಾರ್ಡ್
ಈ ಎಲ್ಲ ದಾಖಲಾತಿಗಳನ್ನು ನೀವು ಪಡೆದುಕೊಂಡು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ನಿಮಗೆ ಒಂದು ಉತ್ತಮವಾದಂತಹ ಅವಕಾಶವನ್ನು ನೀಡಿದ್ದು ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕು. ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ನಿಮ್ಮ ಬ್ಯಾಂಕ್ ಖಾತೆಯ ಒಂದು ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಹೋಗಬೇಕು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು.
ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲಾತಿಗಳು
* ಆಧಾರ್ ಕಾರ್ಡ್
* ಪಾಸ್ಪೋರ್ಟ್ ಸೈಜ್ ಫೋಟೋ
* ನಿಮ್ಮ ಅಡ್ರೆಸ್ ಪ್ರೂಫ್ ನ ಯಾವುದಾದರೂ ಒಂದು ದಾಖಲಾತಿ ( ರೇಷನ್ ಕಾರ್ಡ್, ವೋಟರ್ ಐಡಿ ಕಾರ್ಡ್ ಇತ್ಯಾದಿ)
ಈ ರೀತಿಯಾಗಿ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಉತ್ತಮವಾದಂತಹ ಯೋಜನೆಗಳನ್ನು ಜಾರಿಗೆ ತಂದಿದ್ದು ಬಡವರ ಹಿತ ದೃಷ್ಟಿಯಿಂದ ಸರ್ಕಾರವು ಈ ಎಲ್ಲ ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಯೋಜನೆಯ ಲಾಭವನ್ನು ಎಲ್ಲಾ ಮಹಿಳೆಯರು ಸಹ ಪಡೆದುಕೊಳ್ಳಬಹುದಾಗಿದೆ ಇಂದಿನಿಂದ ಅರ್ಜಿ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು. ಗೃಹ ಲಕ್ಷ್ಮಿ ಯೋಜನೆಯಿಂದ ಕುಟುಂಬದ ಹಿರಿಯ ಮಹಿಳೆಗೆ ತಲ ಎರಡು ಸಾವಿರ ರೂಪಾಯಿಯನ್ನು ಸರ್ಕಾರ ನೀಡಲು ಮುಂದಾಗಿದೆ ಹಾಗೆಯೇ ಎಲ್ಲಾ ಮಹಿಳೆಯರಿಗೂ ಸಹ ಉಚಿತ ಬಸ್ ಪ್ರಯಾಣವನ್ನು ಕಲ್ಪಿಸಿ ಕೊಟ್ಟಿದ್ದು ಈ ಯೋಜನೆಗೆ ಅರ್ಜಿ ಸಲ್ಲಿಸಿ. ಈ ಮಾಹಿತಿ ಇಷ್ಟ ಆದ್ರೆ ತಪ್ಪದೆ ಲೈಕ್ ಮಾಡಿ ಮತ್ತು ಇತರರಿಗೂ ಶೇರ್ ಮಾಡಿ