ಮಹಿಳೆಯರ ಹಿತಾಸಕ್ತಿಯನ್ನು ಕಾಯ್ದುಕೊಳ್ಳಲು ಸರ್ಕಾರ ರೂಪಿಸಿರುವಂತಹ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಬಹಳ ಪ್ರಮುಖವಾದ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯ ಸರ್ಕಾರವು ಇಂದು ಎಲ್ಲಾ ಮಹಿಳೆಯರ ಖಾತೆಗೆ 2000 ರೂಪಾಯಿ ಹಣವನ್ನು ಜಮೆ ಮಾಡಲಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ.
ರಾಜ್ಯದಾದ್ಯಂತ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2000 ಹಣ ಬಿಡುಗಡೆ ಮಾಡಲಿದೆ ರಾಜ್ಯದ ನೂತನ ಮುಖ್ಯಮಂತ್ರಿ ಆದ ಸಿಎಂ ಸಿದ್ದರಾಮಯ್ಯ ಅವರು ಚುನಾವಣೆಗೂ ಮುನ್ನ ಘೋಷಣೆ ಮಾಡಿರುವ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳಿಗೂಮ್ಮೆ ಮಹಿಳೆಯರಿಗೆ 2000 ಹಣ ನೀಡುವ ಯೋಜನೆಯನ್ನು ಚಾಲನೆ ನೀಡಿದ್ದಾರೆ.
ಈ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಇರುವ ಪ್ರತಿಯೊಬ್ಬ ಮಹಿಳೆಯರ ಬ್ಯಾಂಕ್ ಖಾತೆಗೆ 2,000 ಹಣ ನೀಡುವ ಮಹತ್ವದ ಯೋಜನೆಯ ಗೃಹಲಕ್ಷ್ಮಿ ಯೋಜನೆಯನ್ನು ಇಂದು ಚಾಲನೆ ನೀಡಿದ್ದಾರೆ. ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಕೊಳ್ಳಬಹುದಾಗಿದೆ.
ಕಾಂಗ್ರೆಸ್ ಸರ್ಕಾರ ಚುನಾವಣೆಗು ಮುನ್ನ ನೀಡಿರುವ ಪಂಚ ಗ್ಯಾರಂಟಿ ಯೋಜನೆಗಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಕ್ಕಿದ್ದು ಯಾವೆಲ್ಲ ಮಹಿಳೆಯರ ಖಾತೆಗೆ ಹಣ ಬರುತ್ತದೆ ಯಾವ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ಹಾಕಿಲ್ಲ, ಒಂದು ವೇಳೆ ಇಂದು 12 ಗಂಟೆಗಳ ಒಳಗೆ ನಿಮ್ಮ ಖಾತೆಗೆ ಹಣ ಬಂದಿಲ್ಲ ಎಂದರೆ ನೀವು ಏನು ಮಾಡಬೇಕು ಎಂದು ಈ ಕೆಳಕಂಡಂತೆ ತಿಳಿಸಲಾಗಿದೆ.
ಈಗಾಗಲೇ ರಾಜ್ಯದಾದ್ಯಂತ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2000 ಹಣ ಬಿಡುಗಡೆ ಮಾಡಿದ್ದು ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ಜಮಾ ಆಗಿದೆ ಒಂದು ಕೋಟಿ ಹತ್ತು ಲಕ್ಷ ಮನೆ ಒಡತಿಯರಿಗೆ ಯೋಜನೆ ಜಾರಿಯಾಗಲಿದೆ ಇದು ದೇಶದಲ್ಲಿಯೇ ಬೃಹತ್ ಯೋಜನೆ ಇಂತಹ ಯೋಜನೆಯನ್ನು ಯಾರು ನೀಡಿಲ್ಲ
1.10 ಕೋಟಿ ಮಹಿಳೆಯರಿಗೆ ತಿಂಗಳಿಗೆ 2000 ಹಣ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಈ ಬಗ್ಗೆ ಮೈಸೂರಿನಲ್ಲಿ ಸಿಎಂ ಮಾತನಾಡಿ ಈಗಾಗಲೇ ನಾವು ಎಲ್ಲಾ ಗ್ಯಾರೆಂಟಿಗಳನ್ನು ಜಾರಿಗೆ ತಂದಿದ್ದೇವೆ. ಬಡವರ ಕಲ್ಯಾಣಕ್ಕಾಗಿ ಸರ್ಕಾರ 5 ಗ್ಯಾರಂಟಿಗಳನ್ನು ತಂದಿದೆ ತಮ್ಮ ಆಡಳಿತ ನೀಡುವುದೇ ನಮ್ಮ ಸರ್ಕಾರದ ಗುರಿ
ಬಿಜೆಪಿ ಸರ್ಕಾರದ ಅ.ಕ್ರಮಗಳನ್ನು ತನಿಖೆ ಮಾಡಿಸುತ್ತೇವೆ. ಈಗಾಗಲೇ ತನಿಖೆಗೆ ಆಯೋಗಗಳನ್ನು ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಯಾವ ಮಹಿಳೆಯರ ಖಾತೆಗೆ ಹಣ ಬರುವುದಿಲ್ಲ ಎಂದು ನೋಡುವುದಾದರೆ ಅಕ್ಕಿ ಹಣ ಯಾರ ಖಾತೆಗಳಿಗೆ ಜಮಾ ಆಗಿಲ್ಲ ಅಂತಹ ಮಹಿಳೆಯರ ಖಾತೆಗೆ ಹಣ ಬರುವುದಿಲ್ಲ ಮತ್ತು ಎಪಿಎಲ್ ರೇಷನ್ ಕಾರ್ಡ್ ಇರುವ ಮಹಿಳೆಯರ ಬ್ಯಾಂಕ್ ಖಾತೆಯೊಂದಿಗೆ ತಮ್ಮ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡದೆ ಇದ್ದರೆ ಹಣ ಬರುವುದಿಲ್ಲ.
ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್, NPCI ಆಗದೆ ಇರುವುದಿಲ್ಲವೋ ಅಂತಹ ಖಾತೆಗಳಿಗೆ DBT ಮೂಲಕ ಹಣ ಬರುವುದಿಲ್ಲ, ಹಣ ಪಡೆದುಕೊಳ್ಳಲು ನೀವು ಈಗಾಗಲೇ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಸಂಖ್ಯೆ ಲಿಂಕ್ ಮಾಡುವುದರ ಜೊತೆಗೆ NPCI ಮಾಡಿಸಿ ಇದು ಬ್ಯಾಂಕಿನಲ್ಲೇ ಮಾಡಿಕೊಡುತ್ತಾರೆ. ರಾಜ್ಯ ಸರ್ಕಾರದಿಂದ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ನೇರ ನಗದು ವರ್ಗಾವಣೆ ಮೂಲಕ ಅಂದರೆ DBT ಮೂಲಕ ಹಣವನ್ನು ಹಾಕಲಾಗುತ್ತಿದ್ದು. ಅಲ್ಫಬೆಟಿಕ್ ಪ್ರಕಾರ ಎಲ್ಲಾ ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತದೆ.