ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ, ಕಂದಾಯ ಇಲಾಖೆಯ ಸಿಬ್ಬಂದಿ ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಖಾತೆಗೆ 2000 ಹಣ ಬರುವ ಹಾಗೆ ಮಾಡುತ್ತಾರೆ.
ಕಾಂಗ್ರೆಸ್ ಸರ್ಕಾರವು ಭರವಸೆ ನೀಡಿರುವಂತಹ ಐದು ಯೋಜನೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯು ಒಂದಾಗಿದ್ದು ಈ ಯೋಜನೆಯ ಅಡಿಯಲ್ಲಿ ಪ್ರತಿ ಕುಟುಂಬದ ಮಹಿಳೆಯರಿಗೂ ಕೂಡ ಎರಡು ಸಾವಿರ ರೂಪಾಯಿಯನ್ನು ನೀಡಲಾಗುವುದು ಎಂದು ಆದೇಶವನ್ನು ಹೊರಡಿಸಿದೆ. ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ ನೀಡುವ ಯೋಜನೆ ಇದಾಗಿದೆ. ಗೃಹ ಲಕ್ಷ್ಮಿ ಯೋಜನೆಯ ವಿವರವಾದ ರೂಪರೇಷೆ ಹಾಗೂ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ನೀಡಿದೆ. ಸರ್ಕಾರದ ಆದೇಶ ದಿನಾಂಕ 12/06/2023 ಎಂದು ಉಲ್ಲೇಖಿಸಲಾಗಿದೆ ಗೃಹ…