Thursday, September 28, 2023
Home News ರೇಷನ್ ಕಾರ್ಡ್ ಇಲ್ಲದೆ ಇರುವವರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಏನು ಮಾಡಬೇಕು ಗೊತ್ತಾ.?

ರೇಷನ್ ಕಾರ್ಡ್ ಇಲ್ಲದೆ ಇರುವವರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಏನು ಮಾಡಬೇಕು ಗೊತ್ತಾ.?

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು ಈ ಯೋಜನೆಯ ಅಡಿಯಲ್ಲಿ ಎಲ್ಲಾ ಮಹಿಳೆಯರಿಗೂ ಸಹ ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಮಾಡಲು ಸರ್ಕಾರ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದಾರೆ ಇನ್ನು ಕೆಲವರು ಕಾರಣಾಂತರಗಳಿಂದ ಅರ್ಜಿ ಅರ್ಜಿ ಸಲ್ಲಿಕೆ ಆಗುತ್ತಿಲ್ಲ.

ರೇಷನ್ ಕಾರ್ಡ್ ಇಲ್ಲದೇ ಇರುವಂತಹವರು ಈ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಈ ಕುರಿತಾದಂತಹ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ ಇದೇ ಆಗಸ್ಟ್ 28ರಂದು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮನೆಯ ಮುಖ್ಯಸ್ಥ ಮಹಿಳೆಗೆ 2000 ಸಾವಿರ ರೂಪಾಯಿಯನ್ನು ಅವರ ಖಾತೆಗೆ ಹಾಕಲು ಸರ್ಕಾರ ನಿರ್ಧಾರವನ್ನು ಕೈಗೊಂಡಿದೆ.

ಆದರೆ ರೇಷನ್ ಕಾರ್ಡ್ ಇಲ್ಲದೇ ಇರುವಂತಹವರು ಏನು ಮಾಡಬೇಕು ಎಂಬಂತಹ ಮಾಹಿತಿ ಇಲ್ಲಿದೆ ನೋಡಿ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಬರೋಬ್ಬರಿ 1.5 ಕೋಟಿ ಗೃಹಿಣಿಯರು ನೋಂದಣಿಯನ್ನು ಮಾಡಿಸಿದ್ದಾರೆ ಈಗಾಗಲೇ ಫಲಾನುಭವಿಗಳ ಅಂತಿಮ ಪಟ್ಟಿ ಸಿದ್ಧವಾಗಿದ್ದು ಬಹುತೇಕ ಇವರೆಲ್ಲರ ಬ್ಯಾಂಕ್ ಖಾತೆಗೆ ಆಗಸ್ಟ್ 28ರಂದು 2,000 ಹಣವನ್ನು ಜಮಾ ಮಾಡಲು ಸರ್ಕಾರ ನಿರ್ಧಾರವನ್ನು ಕೈಗೊಳ್ಳಿ ಕೈಗೊಂಡಿದೆ.

ರೇಷನ್ ಕಾರ್ಡ್ ಇಲ್ಲದಂತಹ ಮಹಿಳೆಯರು ಏನು ಮಾಡಬೇಕು ಎಂದು ನೋಡುವುದಾದರೆ.

APL, BPL ಕಾರ್ಡ್ ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳ ಮನೆಯ ಜಮಾನಿಯರು ಮಾತ್ರ ಗೃಹಲಕ್ಷ್ಮಿ ಯೋಜನೆಯ ಅಡಿ ಹಣ ಪಡೆಯಲು ಅರ್ಹರಾಗಿರುತ್ತಾರೆ. ಆದರೆ ಅನೇಕರ ಬಳಿ ರೇಷನ್ ಕಾರ್ಡ್ ಇಲ್ಲದೆ ಇರುವ ಕಾರಣದಿಂದಾಗಿ ಯೋಜನೆಗೆ ಅರ್ಹ ಫಲಾನುಭವಿಗಳಾಗಿದ್ದರು ಕೂಡ ಯೋಜನೆಯ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಸರ್ಕಾರವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸ್ವೀಕರಿಸುವುದನ್ನು ನಿಲ್ಲಿಸಲಾಗಿದೆ ಇನ್ನು ಕೆಲವೇ ದಿನಗಳಲ್ಲಿ ಅರ್ಜಿಯನ್ನು ಸ್ವೀಕರಿಸುವ ಪ್ರಕ್ರಿಯೆಯು ಸಹ ಆರಂಭವಾಗಲಿದೆ ಎಂದು ಸರ್ಕಾರ ತಿಳಿಸಿದೆ ಈಗಾಗಲೇ ಸ್ವೀಕೃತವಾಗಿರುವಂತಹ ಅರ್ಜಿಗಳನ್ನು ಪರಿಶೀಲಿಸಲು ಮುಂದಾಗಿದೆ ಶೀಘ್ರದಲ್ಲಿಯೇ ರೇಷನ್ ಕಾರ್ಡ್ ವಿತರಣೆಗೆ ಕ್ರಮ ವಹಿಸುವುದಾಗಿ ಆಹಾರ ಸಚಿವ ಮುನಿಯಪ್ಪ ಅವರು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ನಿರಂತರವಾಗಿ ನಡೆಯುತ್ತಲೇ ಇರುತ್ತದೆ ಯಾವಾಗ ಬೇಕಾದರೂ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು ಕೆಲವರ ಬಳಿ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಗಳು ಇಲ್ಲ ಹೊಸದಾಗಿ ಮಾಡಿಸಬೇಕು ಎಂದು ಕುಳಿತಿದ್ದಾರೆ ಅಂತಹವರು ಪಡಿತರ ಕಾರ್ಡ್ ಮಾಡಿಸಿದ ಬಳಿಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಅರ್ಹ ಫಲಾನುಭವಿಗಳಾಗಿದ್ದರೂ ಕೂಡ ಅವರ ಬಳಿ ರೇಷನ್ ಕಾರ್ಡ್ ಇಲ್ಲದ ಕಾರಣದಿಂದಾಗಿ ಅವರ ಖಾತೆಗೆ 2,000 ಹಣ ಜಮೆಯಾಗುತ್ತಿಲ್ಲ ನೀವು ಹೊಸದಾಗಿ ರೇಷನ್ ಕಾರ್ಡ್ ಮಾಡಿಸಿದ ಬಳಿಕ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಹಣವನ್ನು ಪಡೆದುಕೊಳ್ಳಬಹುದು.

ಗೃಹಲಕ್ಷ್ಮಿ ಯೋಜನೆಗೆ ನಿರ್ದಿಷ್ಟ ನೋಂದಣಿ ದಿನಾಂಕವನ್ನು ಸರ್ಕಾರ ಗೊತ್ತು ಪಡಿಸಿಲ್ಲ ನೋಂದಣಿ ಪ್ರಕ್ರಿಯೆ ಸತತವಾಗಿ ನಡೆಯುತ್ತಲೇ ಇರುತ್ತದೆ ಆದ ಕಾರಣ ನೀವು ಹೊಸದಾಗಿ ರೇಷನ್ ಕಾರ್ಡ್ ಅನ್ನು ಮಾಡಿಸಿಕೊಂಡ ಬಳಿಕ ಯೋಜನೆಯ ಲಾಭ ಪಡೆಯಬಹುದು.

ಸರ್ಕಾರವು ತಿಳಿಸಿರುವ ಹಾಗೆ ಇನ್ನು ಕೆಲವೇ ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಪ್ರಾರಂಭವಾಗಲಿದೆ ಆಗ ನೀವು ಹೊಸದಾಗಿ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದು. ಈ ವಿಷಯದ ಕುರಿತು ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ಸ್ ಮೂಲಕ ತಿಳಿಸಿ ಹಾಗೆ ಈ ಮಾಹಿತಿ ಇಷ್ಟ ಆದ್ರೆ ತಪ್ಪದೆ ಲೈಕ್ ಮಾಡಿ ಮತ್ತು ಇತರರಿಗೂ ಶೇರ್ ಮಾಡಿ.

- Advertisment -