ಸರ್ಕಾರದ 5 ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದ್ದು ಈ ಯೋಜನೆಯಲ್ಲಿ ಹಲವಾರು ಬದಲಾವಣೆಗಳನ್ನು ಈಗಾಗಲೇ ಸರ್ಕಾರವು ಮಾಡಲು ಮುಂದಾಗಿದೆ. 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಸರ್ಕಾರ ಹಿಂದೆ ತೀರ್ಮಾನವನ್ನು ಕೈಗೊಂಡಿತ್ತು ಆದರೆ ಇದೀಗ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 5 ಕೆಜಿ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಿ ಉಳಿದ 5 ಕೆಜಿ ಅಕ್ಕಿಯ ಹಣವನ್ನು ಬಿಪಿಎಲ್ ಕಾರ್ಡನ್ನು ಹೊಂದಿರುವಂತಹ ಅವರ ಖಾತೆಗೆ ನೀಡಲು ಸರ್ಕಾರ ನಿರ್ಧರಿಸಿದೆ.
ಇದೀಗ ಈ ಹಣಕ್ಕಾಗಿ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆ ಆಗಬೇಕಾದರೆ ಆ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗಿರುವುದು ಕಡ್ಡಾಯ ಎಂದು ಸರ್ಕಾರ ತಿಳಿಸಿದೆ ಬಿಪಿಎಲ್ ಪಡಿತರ ಚೀಟಿಯನ್ನು ನೀವು ಹೊಂದಿದ್ದರೆ ಆ ಪಡಿತರ ಚೀಟಿಯಲ್ಲಿ ಮನೆಯ ಮುಖ್ಯಸ್ಥರು ಯಾರು ಎನ್ನುವುದನ್ನು ಕಾರ್ಡ್ ನಲ್ಲಿ ನಮೂದಿಸಲಾಗಿರುತ್ತದೆ ಮನೆಯ ಮುಖ್ಯಸ್ಥರು ಸಾಮಾನ್ಯವಾಗಿ ಮಹಿಳೆಯರೇ ಆಗಿರುತ್ತಾರೆ
ಮನೆಯ ಜಮಾನಿಯ ಹೆಸರಿನಲ್ಲಿ ಬ್ಯಾಂಕ್ ಅಕೌಂಟ್ ಇರಬೇಕು ಬ್ಯಾಂಕ್ ಖಾತೆ ಮಾತ್ರವಲ್ಲದೆ ಖಾತೆಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಆಗಿರುವುದು ಕಡ್ಡಾಯ ಎಂದು ಘೋಷಣೆ ಮಾಡಲಾಗಿದೆ ಒಂದು ವೇಳೆ ನೀವು ಮನೆಯ ಮುಖ್ಯಸ್ಥರದ್ದು ಇಲ್ಲದೇ ಹೋದಲ್ಲಿ ಪಡಿತರ ಚೀಟಿಯಲ್ಲಿ ಇರುವಂತಹ ಯಾರುದಾದರೂ ಒಬ್ಬರ ಹೆಸರಿನಲ್ಲಿ ಖಾತೆಗೆ ಆಧಾರ್ ಲಿಂಕ್ ಆಗಿದ್ದರೂ ಆಗುತ್ತದೆ ಅನ್ನಭಾಗ್ಯ ಯೋಜನೆಯ ಹಣವನ್ನು ಪಡೆಯಲು ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆ ಮಾಡಬೇಕಾಗಿಲ್ಲ ಆದರೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ ಎಂದು ಸರ್ಕಾರ ಈಗಾಗಲೇ ಘೋಷಣೆಯನ್ನು ಮಾಡಿದೆ
ಆಹಾರ ಇಲಾಖೆಯ ಮಾಹಿತಿ ಪ್ರಕಾರ ಈಗಾಗಲೇ 1.28 ಫಲಾನುಭವಿಗಳು ಇದ್ದು ಅದರಲ್ಲಿ 6 ಲಕ್ಷ ಖಾತೆದಾರರ ಅಕೌಂಟ್ ಸಮಸ್ಯೆ ಹಾಗೂ ಆಧಾರ್ ಲಿಂಕ್ ಆಗದೆ ಇರುವ ಸಮಸ್ಯೆ ಇದೆ ಹೀಗಾಗಿ ಜುಲೈ 1 ಕ್ಕೆ ಇಂತಹವರಿಗೆ ದುಡ್ಡು ಕೊಡುವುದು ಸಮಸ್ಯೆಯಾಗಬಹುದು ಅಕೌಂಟ್ ಗೆ ಆಧಾರ್ ಲಿಂಕ್ ಮಾಡಿಸಿದ ಬಳಿಕವಷ್ಟೇ ದುಡ್ಡು ನೇರವಾಗಿ ಡಿಬಿಟಿ ಮೂಲಕ ಜಮೆ ಆಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾನ್ಯವಾಗಿ ಮನೆ ಯಜಮಾನಿ 92% ಮಹಿಳೆಯರೇ ಆಗಿರುವುದರಿಂದ ಗೃಹಲಕ್ಷ್ಮಿ ಯೋಜನೆಗೂ ಮುನ್ನ ಅನ್ನಭಾಗ್ಯದ ದುಡ್ಡು ಮಹಿಳೆಯರಿಗೆ ಬಂದು ಸೇರಲಿದೆ ಮನೆಯ ಮುಖ್ಯಸ್ಥರ ಹೆಸರಿನಲ್ಲಿ ಖಾತೆಗಳು ಇಲ್ಲದೆ ಇದ್ದರೆ ಕುಟುಂಬದ ಬೇರೆ ಸದಸ್ಯರ ಖಾತೆಯ ವಿವರವನ್ನು ಕೊಡಬಹುದು. ಕಾಂಗ್ರೆಸ್ ಸರ್ಕಾರದ 5 ಭರವಸೆಗಳಲ್ಲಿ ಅನ್ನಭಾಗ್ಯ ಯೋಜನೆ ಹಾಗೆಯೇ ಶಕ್ತಿ ಯೋಜನೆ, ಜುಲೈ 1 ರಿಂದ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ.
ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಯಾರೆಲ್ಲಾ ಬಿಪಿಎಲ್ ಕಾರ್ಡ್ ಹೊಂದಿರುತ್ತಾರೋ ಅಂತಹವರಿಗೆ ಇದು ವಿಶೇಷವಾದಂತಹ ಮಾಹಿತಿ ನಿಮ್ಮ ಅಕೌಂಟ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿದೆ ಹೋದಲ್ಲಿ ನಿಮ್ಮ ಖಾತೆಗೆ ಅನ್ನ ಭಾಗ್ಯ ಯೋಜನೆಯ ಹಣ ಬರುವುದಿಲ್ಲ ಹಾಗಾಗಿ ಕೂಡಲೇ ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಮುಖ್ಯ. ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ನಮಗೆ ಕಮೆಂಟ್ಸ್ ಮೂಲಕ ತಿಳಿಸಿ ಹಾಗೆಯೇ ಈ ಮಾಹಿತಿ ಇಷ್ಟ ಆದ್ರೆ ತಪ್ಪದೆ ಲೈಕ್ ಮಾಡಿ ಮತ್ತು ಇತರರಿಗೂ ಶೇರ್ ಮಾಡಿ.